Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಅವನು ತನ್ನ ಸ್ವಂತ ಮಗನನ್ನೇ ಆಹುತಿಕೊಟ್ಟನು. ಕಣಿಕೇಳಿಸುವುದು, ಮಾಟಮಂತ್ರಗಳನ್ನು ಮಾಡಿಸುವುದು, ಜೋತಿಷ್ಯ, ಮುಹೂರ್ತಗಳನ್ನು ನೋಡುವುದು ಮತ್ತು ಭೂತಪ್ರೇತಗಳನ್ನೂ ವಿಚಾರಿಸುವುದು, ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನು ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮನಸ್ಸೆಯು ತನ್ನ ಮಗನನ್ನು ಆಹುತಿಕೊಟ್ಟು ಅವನನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. ಮನಸ್ಸೆಯು ಭವಿಷ್ಯತ್ಕಾಲವನ್ನು ಅರಿಯಲು ಅನೇಕ ಮಾರ್ಗಗಳಲ್ಲಿ ಪ್ರಯತ್ನಿಸುತ್ತಿದ್ದನು. ಅವನು ಪ್ರೇತಾತ್ಮಗಳನ್ನು ವಶಪಡಿಸಿಕೊಂಡಿರುವ ಮಾಂತ್ರಿಕರನ್ನು ಮತ್ತು ತಾಂತ್ರಿಕರನ್ನು ಭೇಟಿಮಾಡಿದನು. ಯೆಹೋವನು ಕೆಟ್ಟದ್ದೆಂದು ಹೇಳಿದ ಅನೇಕಾನೇಕ ಕಾರ್ಯಗಳನ್ನು ಮನಸ್ಸೆಯು ಮಾಡಿದನು. ಯೆಹೋವನು ಕೋಪಗೊಳ್ಳಲು ಇದು ಕಾರಣವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:6
23 ತಿಳಿವುಗಳ ಹೋಲಿಕೆ  

ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿ ಕೊಟ್ಟರು. ಯೆಹೋವನ ದೃಷ್ಟಿಯಲ್ಲಿ ನೀಚಕೃತ್ಯಗಳಾಗಿರುವ ಕಣಿಹೇಳುವುದು, ಮಾಟ ಮಂತ್ರಗಳನ್ನು ಮಾಡುವುದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ತೊಡಗಿಸಿಕೊಂಡು, ಯೆಹೋವನಿಗೆ ಕೋಪವನ್ನೆಬ್ಬಿಸಿದರು.


“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.


“‘ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.


ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.


“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಅಗ್ನಿಪ್ರವೇಶ ಮಾಡಿಸಿದನು. ಕಣಿಹೇಳಿಸುವುದು, ಶಕುನನೋಡಿಸುವುದು, ಯಂತ್ರಹಾಕಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಸತ್ತವರಲ್ಲಿ ವಿಚಾರಿಸುವವರು ಮತ್ತು ಭೂತ ಪ್ರೇತಗಳನ್ನು ಆರಾಧಿಸುವವರು ತಮ್ಮ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?


ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.


“ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?


ಅವನು ಬೆನ್ ಹಿನ್ನೋಮ್ ಎಂಬ ತಗ್ಗಿನಲ್ಲಿ ಧೂಪ ಹಾಕಿಸಿದ್ದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯ ಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಅಗ್ನಿಪ್ರವೇಶ ಮಾಡಿಸಿದನು.


ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು.


ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.


ಇದಲ್ಲದೆ, ಯೋಷೀಯನು ಸತ್ತವರಲ್ಲಿ ವಿಚಾರಿಸುವವರನ್ನೂ, ಭೂತ ಪ್ರೇತ ಆರಾಧಕರನ್ನೂ, ಯೆರೂಸಲೇಮ್, ಯೆಹೂದ ಪ್ರಾಂತ್ಯ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ, ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ್ದ ಧರ್ಮೋಪದೇಶಗ್ರಂಥದಲ್ಲಿದ್ದ ಆಜ್ಞೆಗಳನ್ನು ನೆರವೇರಿಸಿದನು.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.”


“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.


ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಕೋಪಹುಟ್ಟಿಸುವೆನು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.


ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರ ಮಾಡಿದರು; ಇಗೋ, ನನ್ನ ಮಂದಿರದ ಒಳಗೆ ಇದನ್ನು ನಡೆಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು