2 ಅರಸುಗಳು 21:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ಯೆಹೋವನ ಆಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಮತ್ತು ಅವನ ಮಗನಾದ ಸೊಲೊಮೋನನಿಗೂ, “ಈ ಆಲಯದಲ್ಲಿಯೂ, ಇಸ್ರಾಯೇಲರ ಸಕಲ ಗೋತ್ರಗಳಲ್ಲಿಯೂ, ನಾನು ಆರಿಸಿಕೊಂಡ ಯೆರೂಸಲೇಮಿನಲ್ಲಿಯೂ ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ತಾನು ಮಾಡಿಸಿದ ಅಶೇರವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ತಮಗೆ ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವದಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮನಸ್ಸೆಯು ಅಶೇರ ವಿಗ್ರಹಗಳನ್ನು ಕೆತ್ತಿಸಿದನು. ಅವನು ಈ ವಿಗ್ರಹಗಳನ್ನು ಆಲಯದಲ್ಲಿ ಇರಿಸಿದನು. ಯೆಹೋವನು ದಾವೀದನಿಗೆ ಮತ್ತು ದಾವೀದನ ಮಗನಾದ ಸೊಲೊಮೋನನಿಗೆ ಈ ಆಲಯವನ್ನು ಕುರಿತು ಹೀಗೆ ಹೇಳಿದ್ದನು: “ಇಸ್ರೇಲಿನಲ್ಲಿರುವ ಎಲ್ಲಾ ನಗರಗಳಿಂದ ನಾನು ಜೆರುಸಲೇಮನ್ನು ಆರಿಸಿದ್ದೇನೆ. ನಾನು ನನ್ನ ಹೆಸರನ್ನು ಜೆರುಸಲೇಮಿನ ಆಲಯದಲ್ಲಿ ಎಂದೆಂದಿಗೂ ಇರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು. ಅಧ್ಯಾಯವನ್ನು ನೋಡಿ |
ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.