Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ಇಸ್ರಯೇಲರು ಅವರ ಮಾತನ್ನು ಕೇಳದೆ, ಮನಸ್ಸೆಯಿಂದ ಪ್ರೇರಿತರಾಗಿ, ತಮ್ಮ ಮುಂದೆಯೇ ಸರ್ವೇಶ್ವರನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ಇಸ್ರಾಯೇಲ್ಯರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನಾನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯಿಂದ ಪ್ರೇರಿತರಾಗಿ ಮಾಡಿದರು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಆ ಜನಾಂಗಗಳನ್ನು ನಾಶಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ಜನರು ಕೇಳದೆ ಹೋದರು. ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:9
25 ತಿಳಿವುಗಳ ಹೋಲಿಕೆ  

ಸುಳ್ಳಿಗೆ ಕಿವಿಗೊಡುವ ಅಧಿಪತಿಯ ಸೇವಕರೆಲ್ಲಾ ದುಷ್ಟರೇ.


ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ. ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು, ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.


ನಾನು ಬಾರದೆ ಮತ್ತು ಅವರ ಸಂಗಡ ಮಾತನಾಡದೆ ಹೋಗಿದ್ದಾರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಅವರ ಪಾಪಕ್ಕಾಗಿ ಈಗ ಯಾವ ನೆಪವೂ ಇಲ್ಲ.


ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!


ಎಫ್ರಾಯೀಮು ವ್ಯರ್ಥಾಚಾರಗಳನ್ನು ಅನುಸರಿಸಲು ಮನಸ್ಸುಮಾಡಿದ ಕಾರಣ, ಅದು ದೇವರ ನ್ಯಾಯತೀರ್ಪಿಗೆ ಗುರಿಯಾಗಿ ಹಿಂಸಿಸಲ್ಪಟ್ಟಿದೆ, ಜಜ್ಜಲ್ಪಟ್ಟಿದೆ.


ನಮ್ಮ ಅರಸರು, ಪ್ರಧಾನರು, ಹಿರಿಯರು, ಸಾಮಾನ್ಯ ಜನರು, ಇವರಿಗೆಲ್ಲ ನಿನ್ನ ಹೆಸರಿನ ನಿಮಿತ್ತ ನುಡಿದ ನಿನ್ನ ಸೇವಕರಾದ ಪ್ರವಾದಿಗಳ ಕಡೆಗೆ ಕಿವಿಗೊಡಲೇ ಇಲ್ಲ.


ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.


ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.


ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”


ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.


ಯೆಹೋವನೇ, ನೀನು ನಮ್ಮನ್ನು ನೋಡಿದ್ದಿ, ನೀನು ನಿನ್ನ ಭಕ್ತರನ್ನು ದುಷ್ಟರಿಂದ ಸದಾಕಾಲವೂ ತಪ್ಪಿಸಿ ಕಾಪಾಡುವಿ.


ಆಗ ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ,


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಕೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.


ಸಮುವೇಲನು ಎಷ್ಟು ಹೇಳಿದರೂ ಜನರು ಅವನ ಮಾತುಗಳನ್ನು ಕೇಳಲೊಲ್ಲದೆ, “ಇಲ್ಲ; ನಮಗೆ ಅರಸನನ್ನು ನೇಮಿಸಿಕೊಡು;


ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಜನಾಂಗಗಳಿಗಿಂತಲೂ, ಸುತ್ತಲಿನ ದೇಶಗಳವರಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮಗಳನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.”


“‘ನಾನೇ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಕೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಿನ್ನ ಮಧ್ಯದಲ್ಲಿ ರಕ್ತವನ್ನು ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ! ನಿನ್ನ ಕೇಡಿಗಾಗಿ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನು ಹೊಲೆಗೆಡಿಸಿಕೊಂಡ ನಗರಿಯೇ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು