Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಇದಲ್ಲದೆ ಯಾಜಕ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಂತರ ಕಾರ್ಯದರ್ಶಿಯಾದ ಶಾಫಾನನು ರಾಜನಿಗೆ, “ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟನು” ಎಂದು ಹೇಳಿದನು. ಶಾಫಾನನು ರಾಜನಿಗೆ ಆ ಗ್ರಂಥವನ್ನು ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ, “ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆ,” ಎಂದು ತೋರಿಸಿ, ಶಾಫಾನನು ಅದನ್ನು ಅರಸನ ಮುಂದೆ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:10
17 ತಿಳಿವುಗಳ ಹೋಲಿಕೆ  

ಕೂಡಲೆ ಅರಸನು ಸುರುಳಿಯನ್ನು ತರುವುದಕ್ಕೆ ಯೆಹೂದಿಯನ್ನು ಕಳುಹಿಸಿದನು; ಅವನು ಲೇಖಕನಾದ ಎಲೀಷಾಮನ ಕೋಣೆಯೊಳಗಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಸಕಲ ಪ್ರಧಾನರ ಮುಂದೆ ಓದಿದನು.


ಅವರು ಅವನಿಗೆ, “ದಯಮಾಡಿ ಕುಳಿತುಕೊಂಡು ನಮ್ಮ ಮುಂದೆ ಓದು” ಎಂದು ಹೇಳಲು ಬಾರೂಕನು ಅದನ್ನು ಅವರ ಮುಂದೆ ಓದಿದನು.


ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಬರೆದ ಈ ಸುರುಳಿಯಲ್ಲಿನ ಯೆಹೋವನ ಮಾತುಗಳನ್ನು ಉಪವಾಸದ ದಿನದಲ್ಲಿ ಯೆಹೋವನ ಆಲಯದೊಳಗೆ ಯೆರೂಸಲೇಮಿನ ಜನರಿಗೂ, ತಮ್ಮ ತಮ್ಮ ಊರುಗಳಿಂದ ಬಂದಿರುವ ಎಲ್ಲಾ ಯೆಹೂದ್ಯರಿಗೂ ಕೇಳಿಸುವಂತೆ ಓದು.


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ಅಂದು ಜನರ ಮುಂದೆ ಮೋಶೆಯ ಧರ್ಮನಿಯಮಗಳ ಪಾರಾಯಣವು ನಡೆಯುತ್ತಿರಲಾಗಿ, ಅದರಲ್ಲಿ ಅಮ್ಮೋನಿಯರಾಗಲಿ ಹಾಗು ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಪ್ರವೇಶಮಾಡಬಾರದು.


ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.


ಇದಲ್ಲದೆ, ಲೇಖಕನಾದ ಶಾಫಾನನು ಅರಸನಿಗೆ, “ಯಾಜಕನಾದ ಹಿಲ್ಕೀಯನು ನನಗೊಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.


ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.


ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.


ಮೀಕಾಯನು ಜನರ ಮುಂದೆ ಗ್ರಂಥವನ್ನು ಓದುತ್ತಿರುವ ಬಾರೂಕನ ಬಾಯಿಂದ ತಾನು ಕೇಳಿದ್ದ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಲು,


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು