Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ, ಎಂಬುವವರು “ಹುಲ್ದ” ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ, ತಿಕ್ವನ ಮಗನೂ, ಯಾಜಕವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಪತಿ. ಈಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸಿಸುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಯಾಜಕನಾದ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜ ವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆಯು ಯೆರೂಸಲೇವಿುನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:14
14 ತಿಳಿವುಗಳ ಹೋಲಿಕೆ  

ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಆಕೆಯ ಹತ್ತಿರ ವಿಚಾರಿಸಿದರು. ಹಸ್ರನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡನು. ಆಕೆಯು ಯೆರೂಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.


ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.


ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು. ಮದುವೆಯಾಗಿ ಏಳು ವರ್ಷ ಗಂಡನ ಕೂಡ ಸಂಸಾರ ಮಾಡಿ ವಿಧವೆಯಾಗಿದ್ದಳು,


ಅದೇ ದಿನದಲ್ಲಿ ಮೀನುಬಾಗಿಲಿನಿಂದ ಕೂಗಾಟ, ಎರಡನೆಯ ಕೇರಿಯಿಂದ ಗೋಳಾಟ, ಗುಡ್ಡಗಳ ಮೇಲಿನಿಂದ ಭೀಕರ ಶಬ್ದವನ್ನು ಕೇಳುವಿರಿ, ಅಂತು ದೊಡ್ಡ ಗದ್ದಲವಾಗುವುದು” ಇದು ಯೆಹೋವನ ನುಡಿ.


ನಾನು ನಿನ್ನನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ದಾಸತ್ವದಿಂದ ಬಿಡಿಸಿದೆನು. ಮೋಶೆಯನ್ನೂ, ಆರೋನನನ್ನೂ ಮತ್ತು ಮಿರ್ಯಾಮಳನ್ನೂ ನಿನಗೆ ನಾಯಕರನ್ನಾಗಿ ಕಳುಹಿಸಿದೆನು.


ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷ ತೊಲಾ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು.


ಯೇಹುವು ವಸ್ತ್ರಗಾರದ ಅಧಿಪತಿಗೆ, “ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು” ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು.


ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ಕೈಗಳಲ್ಲಿ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯ ಹಿಂದೆ ಹೋದರು.


ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.


ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವನಿಗೆ ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ತಿಳಿಸಿರಿ.


ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.


“‘ನರಪುತ್ರನೇ, ಸ್ವಕಲ್ಪಿತವಾದುದನ್ನು ಕಣಿ ಎಂದು ಹೇಳುವ ನಿನ್ನ ಸ್ವಕುಲ ಸ್ತ್ರೀಯರ ಕಡೆಗೆ ಮುಖ ಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು