Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಆದ ಶಾಫಾನನೆಂಬ ಲೇಖಕನನ್ನು ಕರೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೋಷೀಯನು ತನ್ನ ಆಳಿಕೆಯ ಹದಿನೆಂಟನೆಯ ವರುಷದಲ್ಲಿ ಅಚಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಆದ ಶಾಫಾನನೆಂಬ ಲೇಖಕನನ್ನು ಕರೆದು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೋಷೀಯನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಕಾರ್ಯದರ್ಶಿಯೂ ಆದ ಶಾಫಾನನನ್ನು ದೇವಾಲಯಕ್ಕೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅರಸನು ಕಾರ್ಯದರ್ಶಿಯಾದ ಮೆಷುಲ್ಲಾಮನ ಮಗ, ಅಚಲ್ಯನ ಮಗನಾದ ಶಾಫಾನನನ್ನು ಯೆಹೋವ ದೇವರ ಆಲಯಕ್ಕೆ ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:3
7 ತಿಳಿವುಗಳ ಹೋಲಿಕೆ  

ಯೆಹೋವನ ಆಲಯದ ಪೆಟ್ಟಿಗೆಯಲ್ಲಿ ಬೇಕಾದಷ್ಟು ಹಣ ಇದೆಯೆಂದು ಕಂಡು ಬಂದಾಗೆಲ್ಲಾ, ರಾಜಲೇಖಕನೂ, ಮಹಾಯಾಜಕನೂ ಬಂದು ಅದನ್ನು ಎಣಿಸಿ ಚೀಲಗಳಲ್ಲಿ ಕಟ್ಟಿ ಇಡುವರು.


ಯೆಹೂದದ ಅರಸನೂ, ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವನಿಂದ ಈ ವಾಕ್ಯವನ್ನು ಹೊಂದಿದನು.


ಈ ಪಸ್ಕಹಬ್ಬವು ಅರಸನಾದ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೆರೂಸಲೇಮಿನಲ್ಲಿ ಯೆಹೋವನಿಗಾಗಿ ಆಚರಿಸಲ್ಪಟ್ಟಿತು.


ಆಗ ಬಾರೂಕನು ಯೆಹೋವನ ಆಲಯದೊಳಗೆ ಮೇಲಣ ಪ್ರಾಕಾರದಲ್ಲಿ ಹೊಸ ಬಾಗಿಲ ಹತ್ತಿರ ಲೇಖಕನಾದ ಶಾಫಾನನ ಮಗನಾಗಿರುವ ಗೆಮರ್ಯನ ಕೋಣೆಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಎಲ್ಲಾ ಜನರಿಗೂ ಕೇಳಿಸುವಂತೆ ಓದಿದನು.


ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಲ್ಲಿನ ಯೆಹೋವನ ಮಾತುಗಳನ್ನೆಲ್ಲಾ ಕೇಳಿ, ಅರಮನೆಯಲ್ಲಿ ಲೇಖಕನ ಕೋಣೆಗೆ ಇಳಿದುಹೋದನು.


ಅಲ್ಲಿ ಲೇಖಕನಾದ ಎಲೀಷಾಮನು, ಶೆಮಾಯನ ಮಗನಾದ ದೆಲಾಯನು, ಅಕ್ಬೋರನ ಮಗನಾದ ಎಲ್ನಾಥಾನನು, ಶಾಫಾನನ ಮಗನಾದ ಗೆಮರ್ಯನು, ಹನನೀಯನ ಮಗನಾದ ಚಿದ್ಕೀಯನು ಅಂತು ಪ್ರಧಾನರೆಲ್ಲರೂ ಕುಳಿತುಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು