2 ಅರಸುಗಳು 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ, ಅವನಿಗೆ ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಬೇಕು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ - ದ್ವಾರಪಾಲಕರು ಯೆಹೋವನ ಆಲಯಕ್ಕೆ ಬರುವ ಜನರಿಂದ ಕೂಡಿಸಿದ ಹಣವನ್ನು ಲೆಕ್ಕಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೋಷೀಯನು, “ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ದ್ವಾರಪಾಲಕರು ಜನರಿಂದ ಒಟ್ಟುಗೂಡಿಸಿರುವ ಹಣವನ್ನು ಅವನು ಲೆಕ್ಕಿಸಲಿ. ಜನರು ದೇವಾಲಯಕ್ಕೆ ತೆಗೆದುಕೊಂಡು ಬಂದು ಕೊಟ್ಟ ಹಣವೇ ಇದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ಅವನು ಯೆಹೋವ ದೇವರ ಆಲಯದ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ. ಅಧ್ಯಾಯವನ್ನು ನೋಡಿ |
ಇದಲ್ಲದೆ, ತನ್ನ ತಂದೆಯಾದ ದಾವೀದನ ಆಜ್ಞೆಗೆ ಅನುಸಾರವಾಗಿ ಯಾಜಕ ವರ್ಗಗಳನ್ನೂ, ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವರನ್ನು ಸ್ತುತಿಸಲು, ಯಾಜಕರ ಕೈಕೆಳಗೆ ಸೇವೆಮಾಡುತ್ತಲೂ ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯುತ್ತಲೂ ಇರಬೇಕಾಗಿತ್ತು. ದೇವರ ಮನುಷ್ಯನಾದ ದಾವೀದ ರಾಜನ ಅಪ್ಪಣೆ ಇದೇ ಆಗಿತ್ತು.