Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬಡಗಿ, ಶಿಲ್ಪಿ, ಮೇಸ್ತ್ರಿ ಮೊದಲಾದವರ ಸಂಬಳಕ್ಕಾಗಿಯೂ, ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಅದನ್ನು ಉಪಯೋಗಿಸಿಕೊಳ್ಳಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮೊಕ್ತೇಸರರು ಅದನ್ನು ಯೆಹೋವನ ಆಲಯದ ಜೀರ್ಣೋದ್ಧಾರಮಾಡುವ ಬಡಗಿ ಶಿಲ್ಪಿ ಉಪ್ಪಾರ ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು ಇವುಗಳನ್ನು ಕೊಂಡುಕೊಳ್ಳುವದಕ್ಕಾಗಿಯೂ ಉಪಯೋಗಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲ್ಲಿ ಬಡಗಿಗಳು, ಶಿಲ್ಪಿಗಳು ಮತ್ತು ಕಲ್ಲುಕುಟಿಕರಿದ್ದಾರೆ. ಮರವನ್ನು ಕೊಳ್ಳಲು ಮತ್ತು ಕಲ್ಲುಗಳನ್ನು ಕೆತ್ತಿಸಲು ಈ ಹಣವನ್ನು ಬಳಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಲಯ ದುರಸ್ತಿ ಮಾಡುವಂತೆ ಯೆಹೋವ ದೇವರ ಆಲಯದಲ್ಲಿ ಕೆಲಸ ಮಾಡುವವರಾದ ಬಡಗಿಯರಿಗೂ, ಶಿಲ್ಪಿಗಾರರಿಗೂ, ಕಲ್ಲುಕೆಲಸದವರಿಗೂ ಕೊಟ್ಟು, ಆಲಯವನ್ನು ದುರಸ್ತಿ ಮಾಡಲು ಮರಗಳನ್ನೂ, ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವುದಕ್ಕೆ ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:6
5 ತಿಳಿವುಗಳ ಹೋಲಿಕೆ  

ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.


ಮರ, ಕೆತ್ತಿದ ಕಲ್ಲುಗಳನ್ನು ಕೊಂಡುಕೊಳ್ಳುವುದಕ್ಕೂ, ಆಲಯವನ್ನು ದುರಸ್ತಿ ಮಾಡಲು ಬೇಕಾದ ಎಲ್ಲಾ ವೆಚ್ಚಕ್ಕಾಗಿಯೂ ಉಪಯೋಗಿಸಿದರು.


ಅದಲ್ಲದೆ ಆಲಯದ ಕೆಲಸಮಾಡಿಸುವ ಮುಖ್ಯಸ್ಥರಿಗೆ ಅದನ್ನು ಒಪ್ಪಿಸು ಎಂದು ಹೇಳಬೇಕು, ಮುಖ್ಯಸ್ಥರು ಅದನ್ನು ಯೆಹೋವನ ಆಲಯದ ದುರಸ್ತಿ ಕೆಲಸಕ್ಕೆ ಉಪಯೋಗಿಸಲಿ,


ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲ್ಪಡುವ ಹಣದ ಲೆಕ್ಕವನ್ನು ಕೇಳಬಾರದು” ಎಂದು ಆಜ್ಞಾಪಿಸಿ ಅವನನ್ನು ಯೆಹೋವನ ಆಲಯಕ್ಕೆ ಕಳುಹಿಸಿದನು.


ಅನಂತರ ದಾವೀದನು ಇಸ್ರಾಯೇಲ್ ದೇಶದಲ್ಲಿದ್ದ ಅನ್ಯಜನಗಳನ್ನು ಒಟ್ಟುಗೂಡಿಸುವುದಕ್ಕೆ ಆಜ್ಞಾಪಿಸಿ, ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು