Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 22:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ಅವನು ಹಿಂದಿರುಗಿ ಅರಸನ ಬಳಿಗೆ ಹೋಗಿ, “ನಿಮ್ಮ ಸೇವಕರು ದೇವಾಲಯಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮೇಸ್ತ್ರಿಗಳಿಗೆ ಒಪ್ಪಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅನಂತರ ಅವನು ಹಿಂದಿರುಗಿ ಅರಸನ ಬಳಿಗೆ ಹೋಗಿ - ನಿನ್ನ ಸೇವಕರು ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮೊಕ್ತೇಸರರಿಗೆ ಒಪ್ಪಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕಾರ್ಯದರ್ಶಿಯಾದ ಶಾಫಾನನು ರಾಜನಾದ ಯೋಷಿಯನ ಬಳಿಗೆ ಬಂದು ಅವನಿಗೆ, “ನಿನ್ನ ಸೇವಕರು ದೇವಾಲಯದಲ್ಲಿದ್ದ ಹಣವನ್ನು ವ್ಯಯಮಾಡಿದರು. ಅವರು ಆ ಹಣವನ್ನು ದೇವಾಲಯದಲ್ಲಿ ಕೆಲಸ ಮಾಡಿಸುವ ಮೇಲ್ವಿಚಾರಕರಿಗೆ ಒಪ್ಪಿಸಿದರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕಾರ್ಯದರ್ಶಿಯಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆ, “ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ, ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 22:9
13 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.


ಆಗ ನೆತನ್ಯನ ಮಗನಾದ ಇಷ್ಮಾಯೇಲನೂ ಅವನೊಂದಿಗಿದ್ದ ಹತ್ತು ಜನರೂ ಎದ್ದು ಅಹೀಕಾಮನ ಮಗ ಶಾಫಾನನ ಮೊಮ್ಮಗ ಬಾಬೆಲಿನ ಅರಸನಿಂದ ದೇಶಾಧಿಪತಿಯಾಗಿ ನೇಮಿಸಲ್ಪಟ್ಟವನೂ ಆದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.


ಇದಲ್ಲದೆ ಅಮ್ಮೋನ್ಯರ ಮಧ್ಯದೊಳಗೂ, ಮೋವಾಬ್ ಮತ್ತು ಎದೋಮ್ ಮೊದಲಾದ ದೇಶಗಳಲ್ಲಿಯೂ ಚದುರಿ ಹೋಗಿದ್ದ ಯೆಹೂದ್ಯರೆಲ್ಲರೂ ಬಾಬೆಲಿನ ಅರಸನು ಯೆಹೂದದಲ್ಲಿ ಕೆಲವರನ್ನು ಉಳಿಸಿ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂಬ


ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.


ಯೆಹೂದದ ಅರಸನಾದ ಚಿದ್ಕೀಯನಿಂದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ರಾಯಭಾರಿಗಳಾಗಿ ಬಾಬಿಲೋನಿಗೆ ಕಳುಹಿಸಲ್ಪಟ್ಟ ಶಾಫಾನನ ಮಗನಾದ ಎಲ್ಲಾಸ, ಹಿಲ್ಕೀಯನ ಮಗನಾದ ಗೆಮರ್ಯ ಇವರ ಕೈಯಲ್ಲಿ ಅದನ್ನು ಕಳುಹಿಸಿದನು.


ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸದ ಹಾಗೆ ಶಾಫಾನನ ಮಗನಾದ ಅಹೀಕಾಮನ ಸಹಾಯವು ಅವನಿಗೆ ಒದಗಿತು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.


ಅರಸನು ಯಾಜಕನಾದ ಹಿಲ್ಕೀಯ, ಶಾಫಾನನ ಮಗನಾದ ಅಹೀಕಾಮ್, ಮೀಕಾಯನ ಮಗನಾದ ಅಕ್ಬೋರ್, ಲೇಖಕನಾದ ಶಾಫಾನ್, ತನ್ನ ಸಹಾಯಕನಾದ ಅಸಾಯ ಎಂಬುವವರಿಗೆ,


ಅರಸನಾದ ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚಲ್ಯನ ಮಗನೂ, ಮೆಷುಲ್ಲಾಮನ ಮೊಮ್ಮಗನೂ, ಯೆಹೋವನ ಆಲಯದ ಲೇಖಕನೂ ಆದ ಶಾಫಾನನನ್ನು ಕರೆದು ಅವನಿಗೆ,


ಅವರು ಅರಸನನ್ನು ಕೂಗಿ ಕರೆದಾಗ, ಹಿಲ್ಕೀಯನ ಮಗನೂ, ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ಅವರ ಬಳಿಗೆ ಬಂದರು.


ಪ್ರಧಾನ ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಯೆಹೋವನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿರುತ್ತದೆ” ಎಂದು ಹೇಳಿ, ಅದನ್ನು ಅವನ ಕೈಯಲ್ಲಿ ಕೊಟ್ಟನು. ಶಾಫಾನನು ಅದನ್ನು ಓದಿದನು.


ಇದಲ್ಲದೆ, ಯಾಜಕನಾದ ಹಿಲ್ಕೀಯನು ಲೇಖಕನಾದ ಶಾಫಾನನಿಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು