2 ಅರಸುಗಳು 23:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೂದ ರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಟ್ಟುಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಿಲಿನ ಹೊರಗೆ “ಪರ್ವರೀಮ್” ಎಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜುದೇಯದ ರಾಜರು ಸೂರ್ಯದೇವತೆಗಾಗಿ ಪ್ರತಿಷ್ಠಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಸರ್ವೇಶ್ವರನ ಆಲಯದ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೂದರಾಜರು ಸೂರ್ಯದೇವತೆಗೋಸ್ಕರ ಪ್ರತಿಷ್ಠಿಸಿದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಯೆಹೋವನ ಆಲಯದ ಹೆಬ್ಬಾಗಲಿನ ಹೊರಗೆ ಪರ್ವರೀಮೆಂಬ ಸ್ಥಳದಲ್ಲಿ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲ್ಪಟ್ಟಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪೂರ್ವಕಾಲದಲ್ಲಿ ಯೆಹೂದದ ರಾಜರುಗಳು ದೇವಾಲಯದ ಬಾಗಿಲಿನ ಹತ್ತಿರ ಕೆಲವು ಕುದುರೆಗಳನ್ನು ಮತ್ತು ರಥಗಳನ್ನು ನಿಲ್ಲಿಸುತ್ತಿದ್ದರು. ಇದು ನಾತಾನ್ ಮೆಲೆಕನೆಂಬ ಮುಖ್ಯ ಅಧಿಕಾರಿಯ ಕೋಣೆಯ ಹತ್ತಿರದಲ್ಲಿತ್ತು. ಆ ಕುದುರೆಗಳು ಮತ್ತು ರಥಗಳು ಸೂರ್ಯದೇವತೆಯ ಗೌರವಾರ್ಥವಾಗಿದ್ದವು. ಯೋಷೀಯನು ಕುದುರೆಗಳನ್ನು ತೆಗೆಸಿ ರಥಗಳನ್ನು ಸುಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೂದದ ಅರಸರು ಸೂರ್ಯನಿಗೆ ಪ್ರತಿಷ್ಠೆಪಡಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಯೋಷೀಯನು ಸುಟ್ಟುಹಾಕಿದನು. ಅವು ಯೆಹೋವ ದೇವರ ಆಲಯದ ದ್ವಾರದಲ್ಲಿ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದವು. ಅರಸರು ಸೂರ್ಯನಿಗೆ ಸಮರ್ಪಿಸಿ ನಿಲ್ಲಿಸಿದ್ದ ರಥಗಳನ್ನು ಸಹ ಸುಟ್ಟುಬಿಟ್ಟನು. ಅಧ್ಯಾಯವನ್ನು ನೋಡಿ |