Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇದಲ್ಲದೆ ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್‍ಹಳ್ಳದಲ್ಲಿ ಹಾಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪೂರ್ವಕಾಲದಲ್ಲಿ, ಯೆಹೂದದ ರಾಜರುಗಳು ಅಹಾಬನ ಕಟ್ಟಡದ ಮಾಳಿಗೆಯ ಮೇಲೆ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದರು. ರಾಜನಾದ ಮನಸ್ಸೆಯು ದೇವಾಲಯದ ಎರಡು ಪ್ರಾಕಾರಗಳಲ್ಲಿ ಯಜ್ಞವೇದಿಕೆಗಳನ್ನು ನಿರ್ಮಿಸಿದ್ದನು. ಯೋಷೀಯನು ಆ ಯಜ್ಞವೇದಿಕೆಗಳನ್ನೆಲ್ಲ ನಾಶಗೊಳಿಸಿ, ಅವುಗಳ ಚೂರುಗಳನ್ನು ಕಿದ್ರೋನ್ ಕಣಿವೆಗೆ ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:12
15 ತಿಳಿವುಗಳ ಹೋಲಿಕೆ  

ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣವನ್ನು ಪೂಜಿಸುವವರನ್ನೂ, ಯೆಹೋವನ ಭಕ್ತರೆಂದು ಪ್ರತಿಜ್ಞೆ ಮಾಡಿಕೊಂಡು ಆರಾಧಿಸಿ ಮಲ್ಕಾಮನ ಮೇಲೆ ಆಣೆಯಿಡುವವರನ್ನೂ,


ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ಅಂದರೆ ಯಾವ ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಹಾಕಿ, ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ, ಆ ಮನೆಗಳೆಲ್ಲಾ ಹೊಲಸಾಗಿ ತೋಫೆತ್ ಎಂಬ ಸ್ಥಳಕ್ಕೆ ಸಮಾನವಾಗುವವು.’”


ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.


ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವನಕ್ಷತ್ರಮಂಡಲಗಳಿಗಾಗಿ ಯಜ್ಞವೇದಿಗಳನ್ನು ಕಟ್ಟಿಸಿದನು.


ಅನ್ಯದೇವತಾಪ್ರತಿಮೆಗಳನ್ನೂ, ತಾನು ಮಾಡಿಸಿದ್ದ ಸ್ತಂಭವನ್ನೂ ಯೆಹೋವನ ಆಲಯದಿಂದ ತೆಗೆಸಿ ಯೆಹೋವನ ಮಂದಿರವಿರುವ ಗುಡ್ಡದಲ್ಲಿಯೂ, ಯೆರೂಸಲೇಮಿನಲ್ಲಿಯೂ ಕಟ್ಟಿಸಿದ್ದ ಎಲ್ಲಾ ಯಜ್ಞವೇದಿಗಳನ್ನು ಕೆಡವಿ ಪಟ್ಟಣದ ಹೊರಗೆ ಹಾಕಿಸಿದನು.


ಯೆಹೋವನ ಆಲಯದಲ್ಲಿದ್ದ ಅಶೇರ್ ವಿಗ್ರಹಸ್ತಂಭವನ್ನು ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಅದನ್ನು ಸುಟ್ಟು ಪುಡಿಪುಡಿ ಮಾಡಿಸಿ ಆ ಪುಡಿಯನ್ನು ಸಾಮಾನ್ಯ ಜನರ ಸ್ಮಶಾನದಲ್ಲಿ ಹಾಕಿಬಿಟ್ಟನು.


ತರುವಾಯ ಅರಸನು ಮಹಾಯಾಜಕನಾದ ಹಿಲ್ಕೀಯನಿಗೆ, ಅವನ ಕೈಕೆಳಗಿರುವ ಯಾಜಕರ ಮತ್ತು ದ್ವಾರಪಾಲಕರ ಮುಖಾಂತರವಾಗಿ ಬಾಳ್, ಅಶೇರ್ ಎಂಬ ದೇವತೆಗಳಿಗಾಗಿಯೂ, ಆಕಾಶಸೈನ್ಯಗಳಿಗಾಗಿಯೂ, ಉಪಯೋಗಿಸುತ್ತಿದ್ದ ಎಲ್ಲಾ ಸಾಮಾನುಗಳನ್ನು ಯೆಹೋವನ ಆಲಯದಿಂದ ತರಿಸಿ ಯೆರೂಸಲೇಮಿನ ಹೊರಗಿರುವ ಕಿದ್ರೋನ್ ಬಯಲಿನಲ್ಲಿ ಅವುಗಳನ್ನು ಸುಟ್ಟು ಬೂದಿಯನ್ನು ಬೇತೇಲಿಗೆ ಕಳುಹಿಸಿದನು.


ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ಯಾವನಾದರೂ ಅದರ ಮಾಳಿಗೆಯಿಂದ ಬಿದ್ದು ನಿಮಗೆ ಜೀವಹತ್ಯ ದೋಷವುಂಟಾಗದಂತೆ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಗೋಡೆಯನ್ನು ಕಟ್ಟಿಸಬೇಕು.


ಆಗ ಬೂದಿ, ಹೆಣ ಇವುಗಳಿಂದ ಹೊಲಸಾದ ತಗ್ಗೂ ಅಲ್ಲಿಂದ ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲ ಮೂಲೆ ಇವುಗಳ ವರೆಗಿರುವ ಪ್ರದೇಶವೆಲ್ಲವೂ ಯೆಹೋವನಿಗೆ ಪರಿಶುದ್ಧ ಸ್ಥಾನವಾಗುವವು; ಪಟ್ಟಣವು ಇನ್ನು ಮೇಲೆ ಎಂದಿಗೂ ಕೀಳಲ್ಪಡುವುದಿಲ್ಲ, ಕೆಡವಲ್ಪಡುವುದಿಲ್ಲ” ಎನ್ನುತ್ತಾನೆ.


ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.


ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.


ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.


ಅರಸನಾದ ಆಸನ ಅಜ್ಜಿಯಾದ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿಕೊಂಡಿದ್ದಳು. ಆದುದರಿಂದ ಅವನು ಆಕೆಯನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಅಲ್ಲದೆ ಆ ಮೂರ್ತಿಯನ್ನು ತೆಗೆದು ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರು ಚೂರು ಮಾಡಿ ಸುಟ್ಟುಹಾಕಿಸಿದನು.


“ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು