2 ಅರಸುಗಳು 23:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇದಲ್ಲದೆ, ಅವನು ಒಂದು ಸಮಾಧಿಶಿಲೆಯನ್ನು ಕಂಡು, ಅದು ಏನು? ಎಂದು ವಿಚಾರಿಸಲು ಆ ಊರಿನವರು, “ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿ” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇದಲ್ಲದೆ, ಅವನು ಒಂದು ಸಮಾಧಿ ಶಿಲೆಯನ್ನು ಕಂಡು ಅದೇನೆಂದು ವಿಚಾರಿಸಿದನು. ಆ ಊರಿನವರು, “ನೀವು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ್ದ ಜುದೇಯ ನಾಡಿನವನಾದ ದೈವಪುರುಷನ ಸಮಾಧಿ ಇದು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇದಲ್ಲದೆ ಅವನು ಒಂದು ಸಮಾಧಿಶಿಲೆಯನ್ನು ಕಂಡು ಅದೇನೆಂದು ವಿಚಾರಿಸಲು ಆ ಊರಿನವರು - ನೀನು ಈಗ ಬೇತೇಲಿನ ಯಜ್ಞವೇದಿಗೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದ ದೇಶದವನಾದ ದೇವರ ಮನುಷ್ಯನ ಸಮಾಧಿಯೆಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯೋಷೀಯನು, “ನಾನು ನೋಡುತ್ತಿರುವ ಆ ಸ್ಮಾರಕ ಯಾವುದು?” ಎಂದು ಕೇಳಿದನು. ಆ ನಗರದ ಜನರು ಅವನಿಗೆ, “ಅದು ಯೆಹೂದದಿಂದ ಬಂದ ದೇವಮನುಷ್ಯನ ಸಮಾಧಿ. ನೀನು ಬೇತೇಲಿನ ಯಜ್ಞವೇದಿಕೆಗೆ ಮಾಡಿದ ಕಾರ್ಯಗಳನ್ನು ಕುರಿತು ಈ ಪ್ರವಾದಿಯು ಬಹಳ ಕಾಲದ ಹಿಂದೆಯೇ ಹೇಳಿದ್ದನು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಅರಸನು, “ನಾನು ಕಾಣುವ ಈ ಸಮಾಧಿ ಕಲ್ಲು ಯಾರದು?” ಎಂದು ಕೇಳಿದನು. ಅದಕ್ಕೆ ಆ ಊರಿನವರು ಅವನಿಗೆ, “ನೀನು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದದ ದೇವರ ಮನುಷ್ಯನ ಸಮಾಧಿ,” ಎಂದರು. ಅಧ್ಯಾಯವನ್ನು ನೋಡಿ |