2 ಅರಸುಗಳು 23:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಜೆರುಸಲೇಮಿನವರನ್ನೂ ಪ್ರವಾದಿಗಳನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಚಿಕ್ಕವರೂ ದೊಡ್ಡವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆರೂಸಲೇವಿುನವರನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರು ಪ್ರವಾದಿಗಳು ಇವರನ್ನೂ ಕರಕೊಂಡು ಯೆಹೋವನ ಆಲಯಕ್ಕೆ ಹೋದನು; ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ನಿಬಂಧನಗ್ರಂಥವನ್ನು ಸಂಪೂರ್ಣವಾಗಿ ಓದಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು. ಅಧ್ಯಾಯವನ್ನು ನೋಡಿ |