Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಯ ಮೇಲೆ ವಧಿಸಿ ಆ ಮನುಷ್ಯರ ಎಲುಬುಗಳನ್ನು ಸುಟ್ಟು ಯೆರೂಸಲೇಮಿಗೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯೋಷೀಯನು ಅವುಗಳನ್ನು ಕೆಡವಿಬಿಟ್ಟು, ಅವುಗಳ ಪೂಜಾರಿಗಳನ್ನು ಬಲಿಪೀಠಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಅವುಗಳ ಮೇಲೆ ಸುಡಿಸಿ ಜೆರುಸಲೇಮಿಗೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೋಷೀಯನು ಅವುಗಳನ್ನು ಕೆಡವಿಬಿಟ್ಟು ಅವುಗಳ ಪೂಜಾರಿಗಳನ್ನು ಯಜ್ಞವೇದಿಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಸುಡಿಸಿ ಯೆರೂಸಲೇವಿುಗೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೋಷೀಯನು ಸಮಾರ್ಯದ ಉನ್ನತಸ್ಥಳಗಳಲ್ಲಿದ್ದ ಯಾಜಕರನ್ನೆಲ್ಲ ಕೊಂದುಹಾಕಿದನು. ಅವನು ಯಾಜಕರನ್ನು ಯಜ್ಞವೇದಿಕೆಗಳ ಮೇಲೆಯೇ ಕೊಂದುಹಾಕಿದನು. ಅವನು ಜನರ ಎಲುಬುಗಳನ್ನು ಯಜ್ಞವೇದಿಕೆಯ ಮೇಲೆ ಸುಟ್ಟನು. ಈ ರೀತಿ ಅವನು ಪೂಜೆಯ ಸ್ಥಳಗಳನ್ನು ನಾಶಗೊಳಿಸಿದನು. ನಂತರ ಅವನು ಜೆರುಸಲೇಮಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:20
11 ತಿಳಿವುಗಳ ಹೋಲಿಕೆ  

ಯೆಹೂದ್ಯರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಎದುರಿನಲ್ಲಿಯೇ ಕೊಂದು, ದೇವಸ್ಥಾನವನ್ನೂ ಅದರಲ್ಲಿದ್ದ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ಯೆಹೋವನ ದೇವಾಲಯಕ್ಕೆ ಕಾವಲಿಟ್ಟನು.


ಪೂಜಾರಿಗಳ ಎಲುಬುಗಳನ್ನು ಆ ಯಜ್ಞವೇದಿಗಳ ಮೇಲೆ ಸುಡಿಸಿ ಯೆಹೂದ ಮತ್ತು ಯೆರೂಸಲೇಮನ್ನು ಶುದ್ಧಪಡಿಸಿದನು.


ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.


ಯೆಹೋವನೊಬ್ಬನಿಗೇ ಹೊರತಾಗಿ ಬೇರೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.


ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.


ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.


ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.


ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ, ಐಗುಪ್ತದೇಶದೊಳಗಿಂದ ಕರೆದುಕೊಂಡು ಬಂದ ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ಅವನು ದ್ರೋಹದ ಮಾತುಗಳನ್ನಾಡಿ, ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.


ಪಶುಸಂಗ ಮಾಡಿದವನಿಗೆ ಮರಣಶಿಕ್ಷೆಯಾಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು