2 ಅರಸುಗಳು 23:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅನಂತರ ಅರಸನು ಎಲ್ಲಾ ಜನರಿಗೆ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಬೇಕು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅನಂತರ ಅರಸನು ಜನರೆಲ್ಲರಿಗೆ, ನಿಬಂಧನ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೋಸ್ಕರ ಪಾಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅನಂತರ ಅರಸನು ಎಲ್ಲಾ ಜನರಿಗೆ - ಈ ನಿಬಂಧನಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ರಾಜನಾದ ಯೋಷೀಯನು ಜನರಿಗೆಲ್ಲ, “ನಿಮ್ಮ ದೇವರಾದ ಯೆಹೋವನಿಗಾಗಿ ಪಸ್ಕಹಬ್ಬವನ್ನು ಆಚರಿಸಿರಿ. ಈ ನಿಬಂಧನ ಗ್ರಂಥದಲ್ಲಿ ಬರೆದಿರುವಂತೆಯೇ ಅದನ್ನು ಮಾಡಿ” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅರಸನಾದ ಯೋಷೀಯನು ಸಮಸ್ತ ಜನರಿಗೂ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರ ಪಸ್ಕಹಬ್ಬವನ್ನು ಆಚರಿಸಿರಿ,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿ |