Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಕಂಬದ ಬಳಿಯಲ್ಲಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವದಾಗಿಯೂ ನಿಬಂಧನಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನು ಸ್ತಂಭದ ಬಳಿ ನಿಂತು ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞೆಗಳಿಗೆ, ಒಡಂಬಡಿಕೆಗೆ ಮತ್ತು ಆತನ ನಿಯಮಗಳಿಗೆ ಪೂರ್ಣಹೃದಯದಿಂದಲೂ ಪೂರ್ಣಆತ್ಮದಿಂದಲೂ ವಿಧೇಯನಾಗಿರುವುದಾಗಿಯೂ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಪ್ರಮಾಣಮಾಡಿದನು. ರಾಜನ ಪ್ರಮಾಣಕ್ಕೆ ಬೆಂಬಲ ನೀಡಲು ಜನರೆಲ್ಲರೂ ಎದ್ದುನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:3
36 ತಿಳಿವುಗಳ ಹೋಲಿಕೆ  

ಅಲ್ಲಿ ಅರಸನು ಪದ್ದತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ, ತುತ್ತೂರಿಯನ್ನು ಊದುವವರೂ ಅರಸನ ಹತ್ತಿರ ನಿಂತಿದ್ದರು. ದೇಶದ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.


ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ, ಪ್ರಜೆಗಳೂ ತಾವು ಯೆಹೋವನ ಪ್ರಜೆಗಳಾಗಿರುವುದಾಗಿ ಅಲ್ಲಿ ಪ್ರಮಾಣ ಮಾಡಿದರು. ಇದಲ್ಲದೆ ರಾಜಪ್ರಜೆಗಳೂ ಒಡಂಬಡಿಕೆಮಾಡಿಕೊಂಡರು.


ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.


ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.


ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.


‘ಯೆಹೋವನ ಜೀವದಾಣೆ’ ಎಂದು ಸತ್ಯ, ನ್ಯಾಯ ಮತ್ತು ಧರ್ಮಾನುಸಾರವಾಗಿ ನೀನು ಪ್ರಮಾಣ ಮಾಡಿದರೆ, ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು” ಎಂದು ಹೇಳುತ್ತಾನೆ.


ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ರಾಜನ ಆಜ್ಞೆಯನ್ನು ಕೈಕೊಳ್ಳಬೇಕೆಂಬುದು ನನ್ನ ಬೋಧನೆ.


ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು.


ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.


ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.


ಆ ನಂತರ ಯೆಹೋಯಾದನು ಎಲ್ಲಾ ಜನರನ್ನೂ, ಅರಸನನ್ನೂ ಪ್ರೇರೇಪಿಸಿ ತಾವೆಲ್ಲರೂ ಯೆಹೋವನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣ ಮಾಡಿದನು.


ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತ್ತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು; ಸಾಧಾರಣ ಜನರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ನುಡಿಸುತ್ತಾ ಕೀರ್ತನೆಗಳನ್ನು ಹಾಡುತ್ತಿದ್ದರು. ಇದನ್ನು ಕಂಡಕೂಡಲೆ ಅತಲ್ಯಳು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ” ಎಂದು ಕೂಗಿದಳು.


ಯೆಹೋವನು ಹೋರೇಬಿನಲ್ಲಿ ಇಸ್ರಾಯೇಲರೊಡನೆ ಮಾಡಿದ ನಿಬಂಧನೆ ಅಲ್ಲದೆ, ಆತನು ಮೋವಾಬ್ಯರ ದೇಶದಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು.


ನಾನು ಈಗ ನಿಮಗೆ ಬೋಧಿಸುವ ಯೆಹೋವನ ಆಜ್ಞೆಗಳಿಗೆ ನೀವು ಲಕ್ಷ್ಯಕೊಟ್ಟು, ನಿಮ್ಮ ದೇವರಾದ ಯೆಹೋವನನ್ನು ಸಂಪೂರ್ಣ ಹೃದಯದಿಂದಲೂ, ಸಂಪೂರ್ಣ ಮನಸ್ಸಿನಿಂದಲೂ ಪ್ರೀತಿಸಿ ಆತನನ್ನು ಸೇವಿಸಿದರೆ,


ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,


ನೀವು ನಿಮ್ಮ ದೇವರಾದ ಯೆಹೋವನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರೆ ನೀವು ತಪ್ಪದೆ ನಾಶವಾಗಿ ಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.


ನೀವು ನಿಮ್ಮ ದೇವರಾದ ಯೆಹೋವನನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಮತ್ತು ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.


ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ.


ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.


ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,


ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.


ಈ ಪ್ರಮಾಣದ ನಿಮಿತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಸಂತೋಷದಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾ ಕಡೆಗಳಿಂದಲೂ ಅವರಿಗೆ ಸಮಾಧಾನವನ್ನು ಅನುಗ್ರಹಿಸಿದನು.


ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.


ಲೇಖನ ರೂಪವಾದ ಪ್ರತಿಜ್ಞೆಗೆ ಸಹಿಮಾಡಿದವರು ಯಾರಾರೆಂದರೆ: ಹಕಲ್ಯನ ಮಗನಾದ ನೆಹೆಮೀಯನೆಂಬ ದೇಶಾಧಿಪತಿ ಹಾಗೂ ಯಾಜಕನಾದ ಚಿದ್ಕೀಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು