Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯೋಷೀಯನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ನಂತರ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಜೆರುಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ಸ್ಥಾನದಲ್ಲಿ ಅವನ ಮಗ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಯೆರೂಸಲೇವಿುಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೋಷೀಯನ ಸೇವಕರು ಮೆಗಿದ್ದೋವಿನಿಂದ ರಥದಲ್ಲಿ ಯೋಷೀಯನ ದೇಹವನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು. ಅವರು ಯೋಷೀಯನನ್ನು ಅವನ ಸ್ವಂತ ಸ್ಮಶಾನದಲ್ಲಿ ಸಮಾಧಿಮಾಡಿದರು. ನಂತರ ಸಾಮಾನ್ಯ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಕರೆದು, ಅವನನ್ನು ಅಭಿಷೇಕಿಸಿ ಹೊಸ ರಾಜನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೋಷೀಯನ ಸೇವಕರು ಅವನ ಶವವನ್ನು ಮೆಗಿದ್ದೋವಿನಿಂದ ಯೆರೂಸಲೇಮಿಗೆ ರಥದಲ್ಲಿ ತೆಗೆದುಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ, ಅವನ ತಂದೆಗೆ ಬದಲಾಗಿ ಅವನನ್ನು ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:30
11 ತಿಳಿವುಗಳ ಹೋಲಿಕೆ  

ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಯೆರೂಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಸೇವಕರು ಅವನನ್ನು ಯುದ್ಧರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ ಯೆರೂಸಲೇಮಿಗೆ ತೆಗೆದುಕೊಂಡು ಹೋಗಲು ಅಲ್ಲಿ ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿಮಾಡಿದರು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೋಷೀಯನ ವಿಷಯವಾಗಿ ಗೋಳಾಡಿದರು.


ಆದರೆ ದೇಶದ ಜನರು ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನ ಮಗನಾದ ಯೋಷೀಯನನ್ನು ಅರಸನನ್ನಾಗಿ ಮಾಡಿದರು.


ಅಮಚ್ಯನ ಮರಣದ ನಂತರ ಎಲ್ಲಾ ಯೆಹೂದ್ಯರು ಸೇರಿ ಹದಿನಾರು ವರ್ಷದವನಾದ ಅಜರ್ಯನನ್ನು ಅರಸನನ್ನಾಗಿ ಮಾಡಿದರು.


ಆದುದರಿಂದ, ‘ನಾನು ಈ ದೇಶಕ್ಕೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮರಣಹೊಂದಿ ಸಮಾಧಿ ಸೇರುವಂತೆ ಆಶೀರ್ವದಿಸುವೆನು’ ಎಂದು ಹೇಳಿದ್ದನ್ನು ತಿಳಿಸಿರಿ” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ಯೋಷೀಯನು ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದನಂತರ ಐಗುಪ್ತದ ಅರಸನಾದ ನೆಕೋ ಎಂಬುವವನು ಯುದ್ಧಮಾಡುವುದಕ್ಕೋಸ್ಕರ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಹೋದನು.


ಯೆಹೂದದ ಅರಸನಾದ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಯೆಹೋವನು ಹೇಳುವುದೇನೆಂದರೆ, “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬಾರನು.


“ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,


ಸತ್ತವನಿಗಾಗಿ ಅಳಬೇಡಿರಿ, ಗೋಳಾಡಬೇಡಿರಿ; ಸೆರೆಯಾದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ; ಅವನು ಇನ್ನು ಹಿಂದಿರುಗನು, ಜನ್ಮಭೂಮಿಯನ್ನು ನೋಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು