Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 23:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಬಹು ದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟದ್ದಲ್ಲದೆ ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ, ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಫರೋಹ ನೆಕೋವನು ಇವನನ್ನು ಯೆರೂಸಲೇವಿುನಲ್ಲಿ ಬಹು ದಿವಸಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಫರೋಹ ನೆಕೋವನು ಹಮಾತ್ ದೇಶದ ರಿಬ್ಲಾ ಎಂಬಲ್ಲಿ ಯೆಹೋವಾಹಾಜನನ್ನು ಸೆರೆಹಿಡಿದನು. ಆದ್ದರಿಂದ ಯೆಹೋವಾಹಾಜನು ಜೆರುಸಲೇಮಿನಲ್ಲಿ ಆಳಲಿಲ್ಲ. ಫರೋಹ ನೆಕೋವನು ಮೂರುಸಾವಿರದ ನಾನೂರು ಕಿಲೋಗ್ರಾಂ ಬೆಳ್ಳಿಯನ್ನು ಮತ್ತು ಮೂವತ್ನಾಲ್ಕು ಕಿಲೋಗ್ರಾಂ ಚಿನ್ನವನ್ನು ಕೊಡುವಂತೆ ಯೆಹೂದದವರನ್ನು ಬಲವಂತಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 23:33
18 ತಿಳಿವುಗಳ ಹೋಲಿಕೆ  

ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.


ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.


ಅವನ ಕಾಲದಲ್ಲಿ, ಐಗುಪ್ತದ ಅರಸನಾದ ಫರೋಹ ನೆಕೋ ಎಂಬುವವನು ಅಶ್ಶೂರದ ಅರಸನಿಗೆ ವಿರುದ್ಧವಾಗಿ ಎದ್ದು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು ಅಲ್ಲಿ ಅವನಿಂದ ಹತನಾದನು.


ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.


ಶೆಫಾಮಿನಿಂದ ಅಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವದಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು.


ಗಂಡಸರು ಜಗಳವಾಡುವಾಗ ಗರ್ಭಿಣಿಯಾದ ಹೆಂಗಸಿಗೆ ಏಟು ತಗಲಿದ್ದರಿಂದ ಅವಳಿಗೆ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.


ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.


ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,


ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:


ಅದು ಪಟ್ಟಣಗಳನ್ನು ಹಾಳುಮಾಡಿ, ಬಹಳ ಮಂದಿ ವಿಧವೆಯರಾದವರನ್ನು ಕೆಡಿಸಿತು, ಅದರ ಗರ್ಜನೆಯ ಶಬ್ದಕ್ಕೆ ದೇಶವು ಮತ್ತು ಅದರಲ್ಲಿದ್ದದ್ದೆಲ್ಲವೂ ಕ್ಷೀಣವಾದವು.


ಅದನ್ನು ಸರಪಣಿಗಳಿಂದ ಬಿಗಿದು, ಪಂಜರದಲ್ಲಿ ಹಾಕಿ, ಬಾಬೆಲಿನ ಅರಸನ ಬಳಿಗೆ ತಂದವು. ಅದರ ಧ್ವನಿಯು ಇಸ್ರಾಯೇಲಿನ ಪರ್ವತಗಳಲ್ಲಿ ಇನ್ನು ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿ ಬಿಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು