2 ಅರಸುಗಳು 23:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ನಾಡಿನಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆ ಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿಬಂಗಾರವನ್ನು ನಾಡಿನ ಜನರಿಂದ ಕೂಡಿಸಿ ಫರೋಹನಿಗೆ ತಂದೊಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿಬಂಗಾರವನ್ನು ಕೊಡುವದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ಕರವನ್ನು ನೇವಿುಸಿದನು. ಕರಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ಕೂಡಿಸಿ ಫರೋಹನಿಗೋಸ್ಕರ ತಂದೊಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಯೆಹೋಯಾಕೀಮನು ಫರೋಹ ನೆಕೋವನಿಗೆ ಬೆಳ್ಳಿಬಂಗಾರವನ್ನು ಕೊಟ್ಟನು; ಸಾಮಾನ್ಯ ಜನರಿಗೂ ತೆರಿಗೆಗಳನ್ನು ಹಾಕಿ ಬಂದ ಹಣವನ್ನು ಫರೋಹ ನೆಕೋವನಿಗೆ ಕೊಟ್ಟನು. ಆದ್ದರಿಂದ ಪ್ರತಿಯೊಬ್ಬರು ತಮ್ಮ ಪಾಲಿನ ಬೆಳ್ಳಿಬಂಗಾರಗಳನ್ನು ಕೊಟ್ಟರು. ರಾಜನಾದ ಯೆಹೋಯಾಕೀಮನು ಫರೋಹ-ನೆಕೋವನಿಗೆ ಅವುಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಯೆಹೋಯಾಕೀಮನು ಬೆಳ್ಳಿಯನ್ನೂ, ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಅವನು ಬೆಳ್ಳಿಯನ್ನೂ, ಬಂಗಾರವನ್ನೂ ನೆಕೋ ಫರೋಹನಿಗೆ ಕೊಡಲು ದೇಶದ ಜನರಿಂದ ಪ್ರತಿಯೊಬ್ಬರ ತೆರಿಗೆಯನ್ನು ಬಲವಂತವಾಗಿ ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |