2 ಅರಸುಗಳು 23:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ, ವೇಶ್ಯವೃತ್ತಿಯವರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ್ ದೇವತೆಗಳಿಗಾಗಿ ಗುಡಾರದ ಬಟ್ಟೆಗಳನ್ನು ನೇಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರನ ಆಲಯದ ಪ್ರಾಕಾರದೊಳಗಿದ್ದ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗಾಗಿ ಬಟ್ಟೆಬರೆಗಳನ್ನು ನೇಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನ ಆಲಯದ ಪ್ರಾಕಾರದೊಳಗಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗೋಸ್ಕರ ಗುಡಾರಗಳನ್ನು ನೇಯುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಂತರ ರಾಜನಾದ ಯೋಷೀಯನು ದೇವಾಲಯದಲ್ಲಿದ್ದ ದೇವದಾಸ ದೇವದಾಸಿಯರ ಮನೆಗಳನ್ನು ಕೆಡವಿಹಾಕಿಸಿದನು. ಆ ಮನೆಗಳಲ್ಲಿ ಸುಳ್ಳುದೇವತೆಯಾದ ಅಶೇರಳಿಗೋಸ್ಕರ ಚಿಕ್ಕ ಗುಡಾರಗಳನ್ನು ನೇಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಅಶೇರದೇವತೆಗಾಗಿ ನೇಯ್ಗೆ ಕೆಲಸ ಮಾಡುತ್ತಿದ್ದ ಸ್ತ್ರೀಯರ ಹಾಗೂ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು. ಅಧ್ಯಾಯವನ್ನು ನೋಡಿ |