2 ಅರಸುಗಳು 23:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರೆಯಿಸಿಕೊಂಡು ಅವರು ಧೂಪಹಾಕುತ್ತಿದ್ದ ಪೂಜಾಸ್ಥಳಗಳನ್ನು ನಾಶಮಾಡಿಸಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿ ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಜುದೇಯದ ಪಟ್ಟಣಗಳ ಯಾಜಕರನ್ನೆಲ್ಲಾ ಕರೆಯಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರದೇವತೆಗಳ ಪೂಜಾ ಸ್ಥಳಗಳನ್ನು ಕೆಡವಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಯೆಹೂದ ಪಟ್ಟಣಗಳ ಎಲ್ಲಾ ಯಾಜಕರನ್ನು ಕರಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿಯಾದ ಯೆಹೋಶುವನ ಬಾಗಲಿನ ಎಡಗಡೆಯಲ್ಲಿದ್ದ ದ್ವಾರಗಳ ದೇವತೆಯ ಪೂಜಾಸ್ಥಳಗಳನ್ನು ಕೆಡವಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8-9 ಆ ಸಮಯದಲ್ಲಿ ಯಾಜಕರು ಯಜ್ಞಗಳನ್ನು ಜೆರುಸಲೇಮಿಗೆ ತರಲಿಲ್ಲ ಮತ್ತು ದೇವಾಲಯದಲ್ಲಿನ ಯಜ್ಞವೇದಿಕೆಯ ಮೇಲೆ ಅವುಗಳನ್ನು ಅರ್ಪಿಸಲಿಲ್ಲ. ಯಾಜಕರು ಯೆಹೂದದ ಎಲ್ಲಾ ನಗರಗಳಲ್ಲಿಯೂ ವಾಸಿಸುತ್ತಿದ್ದರು. ಅವರು ಆ ನಗರಗಳಲ್ಲಿನ ಉನ್ನತಸ್ಥಳಗಳಲ್ಲಿ ಧೂಪವನ್ನು ಸುಡುತ್ತಿದ್ದರು ಮತ್ತು ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆ ಉನ್ನತಸ್ಥಳಗಳು ಗೆಬದಿಂದ ಬೇರ್ಷೆಬದವರೆಗೆ ಎಲ್ಲಾ ಕಡೆಗಳಲ್ಲಿದ್ದವು. ಯಾಜಕರು ತಮ್ಮ ಹುಳಿಯಿಲ್ಲದ ರೊಟ್ಟಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿ ಯಾಜಕರಾಗಿದ್ದ ವಿಶೇಷ ಸ್ಥಳಗಳಲ್ಲಿ ತಿನ್ನದೆ ಆ ಊರುಗಳಲ್ಲಿ ಸಾಮಾನ್ಯ ಜನರೊಂದಿಗೆ ತಿನ್ನುತ್ತಿದ್ದರು. ಆದರೆ ರಾಜನಾದ ಯೋಷೀಯನು ಆ ಉನ್ನತಸ್ಥಳಗಳನ್ನು ನಾಶಗೊಳಿಸಿ ಆ ಯಾಜಕರನ್ನು ಜೆರುಸಲೇಮಿಗೆ ಕರೆತಂದನು. ನಗರಾಧಿಕಾರಿಯಾದ ಯೆಹೋಶುವನ ದ್ವಾರದ ಎಡಗಡೆಯಲ್ಲಿದ್ದ ಉನ್ನತಸ್ಥಳಗಳನ್ನು ಯೋಷೀಯನು ನಾಶಗೊಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೋಷೀಯನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರಮಾಡಿ, ಗಿಬೆಯ ಪಟ್ಟಣದಿಂದ ಬೇರ್ಷೆಬದವರೆಗೂ, ಯಾಜಕರು ಧೂಪ ಸುಡುತ್ತಿದ್ದ ಉನ್ನತ ಪೂಜಾಸ್ಥಳಗಳನ್ನೂ ಅಶುದ್ಧ ಮಾಡಿದನು. ಅನಂತರ ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ದ್ವಾರದಲ್ಲಿದ್ದ ಬಾಗಿಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು. ಅಧ್ಯಾಯವನ್ನು ನೋಡಿ |