2 ಅರಸುಗಳು 23:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ, ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕುತ್ತಿದ್ದರೂ ಜೆರುಸಲೇಮಿನಲ್ಲಿ ಇದ್ದ ಸರ್ವೇಶ್ವರನ ಬಲಿಪೀಠದ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ ಅವರಿಗೆ ಯೆರೂಸಲೇವಿುನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವದಕ್ಕೆ ಅಪ್ಪಣೆಯಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಉನ್ನತ ಪೂಜಾಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಬಲಿಪೀಠದ ಬಳಿಯಲ್ಲಿ ಸೇವೆ ಮಾಡದೇ ಇದ್ದರೂ, ತಮ್ಮ ಸಹೋದರರ ಮಧ್ಯದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು. ಅಧ್ಯಾಯವನ್ನು ನೋಡಿ |