Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಳು ಸಾವಿರ ಮಂದಿ ಯೋಧರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಜೆರುಸಲೇಮಿನಿಂದ ಬಾಬಿಲೋನಿಗೆ ಒಯ್ದನು. ಅವರೆಲ್ಲರು ಪುಷ್ಟರೂ ರಣವೀರರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇಶದ ಪ್ರಧಾನಪುರುಷರು ಇವರನ್ನೂ ಏಳು ಸಾವಿರ ಮಂದಿ ಭಟರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಯೆರೂಸಲೇವಿುನಿಂದ ಬಾಬೆಲಿಗೆ ಒಯ್ದನು; ಅವರೆಲ್ಲರೂ ಪುಷ್ಟರೂ ರಣವೀರರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಾಬಿಲೋನ್ ರಾಜನು ಏಳು ಸಾವಿರ ಮಂದಿ ಸೈನಿಕರನ್ನು ಮತ್ತು ಒಂದು ಸಾವಿರ ಮಂದಿ ನುರಿತ ತಜ್ಞರನ್ನು ಮತ್ತು ಕಮ್ಮಾರರನ್ನು ಕರೆದೊಯ್ದನು. ಈ ಜನರೆಲ್ಲರೂ ಸೈನಿಕರಾಗಿದ್ದು, ಯುದ್ಧಗಳಲ್ಲಿ ಹೋರಾಡಲು ಸಮರ್ಥರಾಗಿದ್ದರು. ಬಾಬಿಲೋನ್ ರಾಜನು ಅವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಾಬಿಲೋನಿನ ಅರಸನು ಸಮಸ್ತ ಸ್ಥಿತಿವಂತರಾದ ಏಳು ಸಾವಿರ ಸೈನಿಕರನ್ನೂ, ಕೌಶಲಗಾರರನ್ನೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಾಬಿಲೋನಿಗೆ ಸೆರೆಯಾಗಿ ಒಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:16
8 ತಿಳಿವುಗಳ ಹೋಲಿಕೆ  

ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.


ಇದು ಅರಸನಾದ ಯೆಕೊನ್ಯನು, ರಾಜಮಾತೆಯು, ಕಂಚುಕಿಗಳು, ಯೆಹೂದದ ಮತ್ತು ಯೆರೂಸಲೇಮಿನ ಸರದಾರರು, ಶಿಲ್ಪಿಗಳು, ಕಮ್ಮಾರರು ಇವರು ಯೆರೂಸಲೇಮಿನಿಂದ ತೊಲಗಿದ ಮೇಲೆ ನಡೆದ ಸಂಗತಿಗಳು.


ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.


ನಿನ್ನ ಪ್ರಾಣವನ್ನು ಹುಡುಕಿ ನಿನ್ನಲ್ಲಿ ಭಯವನ್ನು ಹುಟ್ಟಿಸುವವರ ಕೈಗೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಕಸ್ದೀಯರ ಕೈಗೆ ಕೊಟ್ಟುಬಿಡುವೆನು.


ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡು ಅವನಿಂದ ಆಣೆಯಿಡಿಸಿದನು.


ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.


ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು