Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಚಿದ್ಕೀಯನು ಇಪ್ಪತ್ತೊಂದು ವರ್ಷ ತುಂಬಿದ ಮೇಲೆ ಅರಸನಾಗಿ ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರುಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದವಳೂ ಯೆರೆವಿುಯಾನ ಮಗಳೂ ಆದ ಹಮೂಟಲ್ ಎಂಬಾಕೆಯು ಇವನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಚಿದ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:18
8 ತಿಳಿವುಗಳ ಹೋಲಿಕೆ  

ಯೆಹೋವಾಹಾಜನು ಅರಸನಾದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳುಗಳ ಕಾಲ ಆಳಿದನು. ಲಿಬ್ನದವನಾದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.


ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.


ಅರಸನಾದ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನೂ, ಯಾಜಕನು ಮಾಸೇಯನ ಮಗನು ಆದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆಹೋವನಿಂದ ಯೆರೆಮೀಯನಿಗೆ ಈ ಅಪ್ಪಣೆಯಾಯಿತು.


ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,


ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ಯೆಹೋವನು ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು