2 ಅರಸುಗಳು 24:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವುಗಳಿಗಾಗಿ ಯೆಹೋವನು ಯೆರೂಸಲೇಮಿನವರನ್ನು ಕ್ಷಮಿಸದೆ ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದರಿಂದ ಅವರಿಗೆ ಶಿಕ್ಷೆಯಾಯಿತು. ಇದು ಯೆಹೋವನ ಅಪ್ಪಣೆಯ ಪ್ರಕಾರ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವುಗಳಿಗಾಗಿ ಆತನು ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದದರಿಂದ ಆತನ ಅಪ್ಪಣೆಯ ಪ್ರಕಾರ ಈ ಶಿಕ್ಷೆಯು ಅವರಿಗೆ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಜೆರುಸಲೇಮನ್ನು ನಿರಪರಾಧದ ರಕ್ತದಿಂದ ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ. ಅಧ್ಯಾಯವನ್ನು ನೋಡಿ |