Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 24:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋಯಾಕೀಮನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು ಮೃತನಾಗಿ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಯೆಹೋಯಾಖೀನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವನು ಪಿತೃಗಳ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಖೀನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋಯಾಕೀಮನು ತೀರಿಕೊಂಡಾಗ ಅವನನ್ನು ಅವನ ಪೂರ್ವಿಕರ ಜೊತೆಯಲ್ಲಿ ಸಮಾಧಿಮಾಡಿದರು. ಯೆಹೋಯಾಕೀಮನ ಮಗನಾದ ಯೆಹೋಯಾಖೀನನು ಅವನ ನಂತರ ಹೊಸ ರಾಜನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋಯಾಕೀಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 24:6
7 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ಇವನ ಸಂತಾನದಲ್ಲಿ ಯಾರೂ ದಾವೀದನ ಸಿಂಹಾಸನಾರೂಢನಾಗನು; ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ, ರಾತ್ರಿಯ ಚಳಿಗೂ ಈಡಾಗುವುದು.


ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,


ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.


ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ (ಇತಿಹಾಸ) ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಯೆಹೋವನು ಹೀಗೆನ್ನುತ್ತಾನೆ, “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಕೊನ್ಯನೆಂಬ ನೀನು ನನ್ನ ಬಲಗೈಯ ಮುದ್ರೆಯುಂಗರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆನು!


“ಇಸ್ರಾಯೇಲಿನ ರಾಜರ ವಿಷಯವಾಗಿ ಈ ಶೋಕ ಗೀತೆಯನ್ನು ಹಾಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು