Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ವ್ಯವಸಾಯಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಆ ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:12
10 ತಿಳಿವುಗಳ ಹೋಲಿಕೆ  

ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.


ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.


“ನರಪುತ್ರನೇ, ಇಸ್ರಾಯೇಲ್ ಸೀಮೆಯ ಹಾಳು ಪ್ರದೇಶಗಳಲ್ಲಿ ವಾಸಿಸುವವರು ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ದೇಶವು ಅವನಿಗೆ ಸ್ವತ್ತಾಗಿ ಸಿಕ್ಕಿತಲ್ಲಾ; ಅದು ಬಹು ಜನರಾದ ನಮಗೆ ಸ್ವತ್ತಾಗಿ ಸಿಕ್ಕಿದ್ದು ಬಹು ದೊಡ್ಡದು?’” ಎಂದು ಅಂದುಕೊಳ್ಳುತ್ತಿದ್ದಾರೆ.


ಆದರೆ ನೆಬೂಜರದಾನನು ಹೊಲಗಳನ್ನೂ ಹಾಗು ದ್ರಾಕ್ಷಿಯ ತೋಟಗಳನ್ನೂ ವ್ಯವಸಾಯ ಮಾಡುವುದಕ್ಕಾಗಿ ದೇಶದ ಜನರಲ್ಲಿ ಕೆಲವು ಬಡ, ದಿಕ್ಕಿಲ್ಲದವರನ್ನು ಮಾತ್ರ ಬಿಟ್ಟುಹೋದನು.


ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.


ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.


ಬಾಬೆಲಿನ ಅರಸನು ಏಳು ಸಾವಿರ ಮಂದಿ ಭಟರನ್ನೂ, ಸಾವಿರ ಮಂದಿ ಕಮ್ಮಾರರನ್ನೂ, ಬಡಗಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಕರೆದುಕೊಂಡು ಹೋದನು. ಅವರೆಲ್ಲರೂ ಪರಾಕ್ರಮಶಾಲಿಗಳೂ ಯುದ್ಧವೀರರೂ ಆಗಿದ್ದರು.


ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.


ನನ್ನ ಸಹೋದರಲ್ಲಿ ಒಬ್ಬನಾದ ಹನಾನೀಯನೂ, ಬೇರೆ ಕೆಲವರು ಯೆಹೂದ ಜನರೊಂದಿಗೆ, ನನ್ನ ಬಳಿಗೆ ಬಂದರು. ಸೆರೆಯಾಳುಗಳಾಗಿ ಹೋಗಿದ್ದವರಲ್ಲಿ ಕೆಲವು ಯೆಹೂದ್ಯರು ತಪ್ಪಿಸಿಕೊಂಡು ನನ್ನ ಬಳಿಗೆ ಬಂದಾಗ ಯೆರೂಸಲೇಮಿನ ಸಮಾಚಾರವನ್ನು ನಾನು ಅವರ ಹತ್ತಿರ ವಿಚಾರಿಸಿದೆನು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು