Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಅಗ್ಗಿಷ್ಟಿಕೆ, ಬಟ್ಟಲು, ಮೊದಲಾದುವುಗಳನ್ನು ದೋಚಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಗೆ ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನೆಬೂಜರದಾನನು ಅಗ್ಗಿಷ್ಟಿಕೆಗಳನ್ನು ಮತ್ತು ಬಟ್ಟಲುಗಳನ್ನು ತೆಗೆದುಕೊಂಡು ಹೋದನು. ಅವನು ಬಂಗಾರದ ವಸ್ತುಗಳನ್ನು ಬಂಗಾರಕ್ಕಾಗಿಯೂ ಬೆಳ್ಳಿಯ ವಸ್ತುಗಳನ್ನು ಬೆಳ್ಳಿಗಾಗಿಯೂ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:15
10 ತಿಳಿವುಗಳ ಹೋಲಿಕೆ  

ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಲಾಗಿತ್ತು.


ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.


ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.


ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.


ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು