2 ಅರಸುಗಳು 25:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಗೆದಲ್ಯನು ಇವರಿಗೂ ಇವರ ಜನರಿಗೂ, “ಬಾಬಿಲೋನಿಯಾದ ಸೈನ್ಯದವರಿಗೆ ಹೆದರಬೇಡಿ; ಬಾಬಿಲೋನಿನ ಅರಸನಿಗೆ ಅಧೀನರಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಶುಭವಾಗುವುದು,” ಎಂದು ಆಣೆಯಿಟ್ಟು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಗೆದಲ್ಯನು ಇವರಿಗೂ ಇವರ ಜನರಿಗೂ - ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ; ಬಾಬೆಲಿನ ಅರಸನಿಗೆ ಒಳಗಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಸುಖವಾಗುವದು ಎಂದು ಆಣೆಯಿಟ್ಟು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಂತರ ಗೆದಲ್ಯನು ಈ ಸೇನಾಧಿಪತಿಗಳಿಗೆ ಮತ್ತು ಅವರ ಜನರಿಗೆ, “ಬಾಬಿಲೋನ್ ಅಧಿಕಾರಿಗಳಿಗೆ ನೀವು ಹೆದರಬೇಡಿ. ನೀವು ದೇಶದಲ್ಲಿ ವಾಸಿಸುತ್ತ ಬಾಬಿಲೋನ್ ರಾಜನ ಸೇವೆಯನ್ನು ಮಾಡಿ. ಆಗ ನಿಮಗೇನೂ ತೊಂದರೆಯಾಗುವುದಿಲ್ಲ” ಎಂದು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು. ಅಧ್ಯಾಯವನ್ನು ನೋಡಿ |
ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.