Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 25:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ, ಜುದೇಯದ ಅರಸ ಯೆಹೋಯಾಖೀನನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಸೆರೆಯಿಂದ ಬಿಡಿಸಿ ಉದ್ಧಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಾಬಿಲೋನ್ ರಾಜನಾದ ಎವೀಲ್ಮೆರೋದಕನು, ಯೆಹೂದದ ರಾಜನಾದ ಯೆಹೋಯಾಖೀನನನ್ನು ಸೆರೆಯಿಂದ ಬಿಡುಗಡೆ ಮಾಡಿದನು. ಯೆಹೋಯಾಖೀನನನ್ನು ಸೆರೆಹಿಡಿದ ಮೂವತ್ತೇಳನೆಯ ವರ್ಷದ ನಂತರ ಇದು ಸಂಭವಿಸಿತು. ಎವೀಲ್ಮೆರೋದಕನ ಆಳ್ವಿಕೆಯ ಹನ್ನೆರಡನೆ ತಿಂಗಳಿನ ಇಪ್ಪತ್ತೇಳನೆಯ ದಿನದಂದು ಇದು ಸಂಭವಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 25:27
10 ತಿಳಿವುಗಳ ಹೋಲಿಕೆ  

ಮೂರನೆಯ ದಿನದಲ್ಲಿ ಫರೋಹನ ಜನ್ಮ ದಿನವಾದುದರಿಂದ ಅವನು ತನ್ನ ಸೇವಕರೆಲ್ಲರಿಗೆ ಔತಣವನ್ನು ಮಾಡಿಸಿ ಮುಖ್ಯಪಾನದಾಯಕನನ್ನೂ ಮತ್ತು ಮುಖ್ಯ ಅಡಿಗೆಭಟ್ಟನನ್ನು ಬಿಡಿಸಿ ಸೇವಕರ ಮಧ್ಯದಲ್ಲಿ ನಿಲ್ಲಿಸಿದನು.


ಆಗ ಯೆಹೂದದ ಅರಸನಾದ ಯೆಹೋಯಾಖೀನನು ತನ್ನ ತಾಯಿಯ ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಬಾಬೆಲಿನ ಅರಸನ ಬಳಿಗೆ ಹೋದನು. ಬಾಬೆಲಿನ ಅರಸನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.


ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.


ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.


ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀನನನ್ನೂ, ಅವನ ತಾಯಿ, ಹೆಂಡತಿ, ಕಂಚುಕಿಗಳನ್ನೂ ಮತ್ತು ದೇಶದ ಪ್ರಧಾನ ಪುರುಷರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ತೆಗೆದುಕೊಂಡುಹೋದನು.


“‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”


ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.


ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು