2 ಅರಸುಗಳು 25:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಬಾಬಿಲೋನಿಯದ ಸೈನಿಕರು ಅವನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲರು ಅವನನ್ನು ಬಿಟ್ಟು ಚದರಿಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕಸ್ದೀಯರ ಸೈನ್ಯದವರು ಅವನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಾಬಿಲೋನ್ ಸೇನೆಯು ರಾಜನಾದ ಚಿದ್ಕೀಯನನ್ನು ಅಟ್ಟಿಸಿಕೊಂಡು ಹೋಗಿ, ಅವನನ್ನು ಜೆರಿಕೊವಿನ ಸಮೀಪದಲ್ಲಿ ಹಿಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು. ಅಧ್ಯಾಯವನ್ನು ನೋಡಿ |
ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.