Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಎಲೀಷನು ಇಸ್ರಾಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು” ಎಂದು ಹೇಳಿದನು. ಅದಕ್ಕೆ ಇಸ್ರಾಯೇಲರ ಅರಸನು, “ಹಾಗೆ ಹೇಳಬೇಡ, ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಎಲೀಷನು ಇಸ್ರಾಯೇಲ್ಯರ ಅರಸನಿಗೆ - ನನಗೂ ನಿನಗೂ ಗೊಡವೆಯೇನು? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು ಎಂದು ಹೇಳಿದನು. ಅದಕ್ಕೆ ಇಸ್ರಾಯೇಲ್ಯರ ಅರಸನು - ಹಾಗನ್ನಬೇಡ; ಯೆಹೋವನು ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವದಕ್ಕೋಸ್ಕರ ಇಲ್ಲಿಗೆ ಬರಮಾಡಿದನಲ್ಲವೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಎಲೀಷನು ಇಸ್ರೇಲಿನ ರಾಜನಿಗೆ, “ನನ್ನಿಂದ ನಿನಗೆ ಏನು ಬೇಕಾಗಿದೆ? ನಿನ್ನ ತಂದೆತಾಯಿಯರ ಪ್ರವಾದಿಗಳ ಬಳಿಗೆ ಹೋಗು!” ಎಂದು ಹೇಳಿದನು. ಇಸ್ರೇಲಿನ ರಾಜನು ಎಲೀಷನಿಗೆ, “ಇಲ್ಲ, ನಾವು ನಿನ್ನನ್ನು ನೋಡಲೆಂದು ಇಲ್ಲಿಗೆ ಬಂದಿದ್ದೇವೆ, ಏಕೆಂದರೆ ಯೆಹೋವನು ಮೂವರು ರಾಜರನ್ನು ಒಟ್ಟಿಗೆ ಬರಮಾಡಿ, ನಮ್ಮನ್ನು ಮೋವಾಬ್ಯರು ಸೋಲಿಸುವಂತೆ ಮಾಡಿದ್ದಾನೆ. ನಾವು ನಿನ್ನ ಸಹಾಯವನ್ನು ಬಯಸಿದ್ದೇವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಎಲೀಷನು ಇಸ್ರಾಯೇಲಿನ ಅರಸನಿಗೆ, “ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆಯ ಪ್ರವಾದಿಗಳ ಬಳಿಗೂ, ನಿನ್ನ ತಾಯಿಯ ಪ್ರವಾದಿಗಳ ಬಳಿಗೂ ಹೋಗು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ಇಲ್ಲ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕೆ ಒಟ್ಟಾಗಿ ಕರೆದಿದ್ದಾರಲ್ಲಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:13
19 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.


ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.


ಇಸ್ರಾಯೇಲರ ಅರಸರು, “ಅಯ್ಯೋ, ಯೆಹೋವನು ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕೋಸ್ಕರ ಇಲ್ಲಿಗೆ ಬರಮಾಡಿದ್ದಾನೆ” ಎಂದು ಗೋಳಾಡಿದರು.


ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.


ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.


ಅವರು, “ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ” ಎಂದು ಕೂಗಿದರು.


ಅವರು, “ಯೆಹೋವನ ಕಡೆಗೆ ಹಿಂದಿರುಗಿ ಹೋಗೋಣ ಬನ್ನಿರಿ; ನಮ್ಮನ್ನು ಸೀಳಿಬಿಟ್ಟವನು ಆತನೇ, ಆತನೇ ಸ್ವಸ್ಥ ಮಾಡುವನು; ಹೊಡೆದವನು ಆತನೇ, ಆತನೇ ನಮ್ಮ ಗಾಯಗಳನ್ನು ಕಟ್ಟುವನು.


ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.


ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು.


ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು