Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈಗ, ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರೆದುಕೊಂಡು ಬನ್ನಿರಿ” ಎಂದು ಹೇಳಿದನು. ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈಗ ಒಬ್ಬ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಸರ್ವೇಶ್ವರನ ಶಕ್ತಿ ಪ್ರಾಪ್ತವಾಗುತ್ತಿತ್ತು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈಗ ಒಬ್ಬ ವಾದ್ಯಗಾರನನ್ನು ನನ್ನ ಹತ್ತಿರ ಕರಕೊಂಡು ಬನ್ನಿರಿ ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗೆಲ್ಲಾ ಎಲೀಷನಲ್ಲಿ ಯೆಹೋವನ ಬಲವು ಬರುತ್ತಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಈಗ ಕಿನ್ನರಿ ಬಾರಿಸುವ ಒಬ್ಬನನ್ನು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು. ಅವನು ಕಿನ್ನರಿಯನ್ನು ಬಾರಿಸಿದಾಗ ಯೆಹೋವನ ಶಕ್ತಿಯು ಎಲೀಷನ ಮೇಲೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಈಗ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬಾ,” ಎಂದನು. ಆ ವಾದ್ಯ ಬಾರಿಸುವವನು ಬಾರಿಸಿದಾಗ, ಯೆಹೋವ ದೇವರ ಕೈ ಎಲೀಷನ ಮೇಲೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:15
14 ತಿಳಿವುಗಳ ಹೋಲಿಕೆ  

ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ನುಡಿಸುವನು; ಅದರಿಂದ ದುರಾತ್ಮವು ಸೌಲನನ್ನು ಬಿಟ್ಟುಹೋಗುವುದು; ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.


ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.


ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.


ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.


ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.


ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.


ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.


ಮರುದಿನ ದೇವರಿಂದ ಕಳುಹಿಸಲ್ಪಟ್ಟ ದುರಾತ್ಮವು ಸೌಲನ ಮೇಲೆ ಬಂದದ್ದರಿಂದ ಅವನು ಬುದ್ಧಿಗೆಟ್ಟು ಮನೆಯೊಳಗೆ ಕೂಗುತ್ತಿದ್ದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ದಾವೀದನು ವಾಡಿಕೆಯ ಪ್ರಕಾರ ಕಿನ್ನರಿಯನ್ನು ನುಡಿಸುತ್ತಾ ಇದ್ದನು.


ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.


ಅನಂತರ ಎಲೀಷನು ಇಸ್ರಾಯೇಲರ ಅರಸನಿಗೆ, ಯೆಹೋವನು ಹೀಗೆ ಹೇಳುತ್ತಾನೆ, “ಈ ಹಳ್ಳದಲ್ಲಿ ತುಂಬಾ ಗುಂಡಿಗಳನ್ನು ಮಾಡಿರಿ.


ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು