Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಯೆಹೋವನ ದೃಷ್ಟಿಯಲ್ಲಿ ಈ ಕಾರ್ಯವೂ ಸುಲಭವಾಗಿರುವುದು. ಅದೇ ರೀತಿಯಾಗಿ ಯೆಹೋವನು ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವರು ತಮ್ಮ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯ ಮಾತ್ರವಲ್ಲ, ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ತನ್ನ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯದ ಹೊರತಾಗಿ ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನಿಗೆ ಇದು ಸುಲಭ ಸಾಧ್ಯ. ಮೋವಾಬ್ಯರನ್ನು ನೀವು ಸೋಲಿಸುವಂತೆ ಆತನೇ ಅವಕಾಶ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇದಲ್ಲದೆ ಇದು ಯೆಹೋವ ದೇವರ ದೃಷ್ಟಿಗೆ ಅಲ್ಪವಾಗಿರುವುದು. ಅವರು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:18
16 ತಿಳಿವುಗಳ ಹೋಲಿಕೆ  

ದೇವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ” ಅಂದನು.


“ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ?


“ಆಹಾ! ಕರ್ತನಾದ ಯೆಹೋವನೇ! ನೀನು ಭುಜವನ್ನೆತ್ತಿ ನಿನ್ನ ಮಹಾ ಶಕ್ತಿಯಿಂದ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದಿ; ಯಾವ ಕಾರ್ಯವೂ ನಿನಗೆ ಅಸಾಧ್ಯವಲ್ಲ.


ಅದಕ್ಕೆ ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ, ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು” ಎಂದು ಹೇಳಿದನು.


ನಮ್ಮಲ್ಲಿ ಕಾರ್ಯಸಾಧಿಸುವ ತನ್ನ ಈ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ


ಯೇಸು ಅವರನ್ನು ದೃಷ್ಟಿಸಿ ನೋಡಿ “ಇದು ಮನುಷ್ಯರಿಗೆ ಅಸಾಧ್ಯ; ದೇವರಿಗೆ ಅಸಾಧ್ಯವಲ್ಲ. ದೇವರಿಗೆ ಎಲ್ಲವೂ ಸಾಧ್ಯವೇ” ಅಂದನು.


ಆತನು ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವೇ ಸರಿ. ನನ್ನ ರಕ್ಷಣೆಯು ಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ದಯಪಾಲಿಸುವೆನು.”


ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳಿದನು.


ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.


ಅದಕ್ಕೆ ಯೆಶಾಯನು ಹೀಗೆ ಹೇಳಿದನು, “ದಾವೀದನ ಮನೆತನದವರೇ ಕೇಳಿರಿ, ಮನುಷ್ಯರನ್ನು ಬೇಸರಗೊಳಿಸುವುದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವರನ್ನು ಸಹ ಬೇಸರಗೊಳಿಸುವಿರಾ?


ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.


ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಕರ್ತನೇ, ಯೆಹೋವನೇ! ಇದು ನಿನ್ನ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನನ್ನ ಮುಂದಿನ ಸಂತಾನದ ವಿಷಯದಲ್ಲಿಯೂ ವಾಗ್ದಾನ ಮಾಡಿರುವೆ. ಕರ್ತನೇ, ಯೆಹೋವನೇ! ನೀನು ಮಾನವರಾದ ನಮ್ಮೊಂದಿಗೆ ಹೀಗೆ ವರ್ತಿಸುವುದು ಎಂಥಾ ಭಾಗ್ಯ.


ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು