2 ಅರಸುಗಳು 3:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಳ್ಳುವಿರಿ. ಎಲ್ಲ ಹಣ್ಣಿನ ಮರಗಳನ್ನು ಕಡಿದುಹಾಕಿ, ಬಾವಿಗಳನ್ನು ಮುಚ್ಚಿಬಿಟ್ಟು, ಹೊಲಗಳನ್ನು ಕಲ್ಲು ತುಂಬಿಸಿ ಹಾಳುಮಾಡುವಿರಿ,” ಎಂದು ನುಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು ಎಲ್ಲಾ ಹಣ್ಣಿನ ಮರಗಳನ್ನು ಕಡಿದುಹಾಕಿ ಬಾವಿಗಳನ್ನು ಮುಚ್ಚಿಬಿಟ್ಟು ಹೊಲಗಳನ್ನು ಕಲ್ಲು ತುಂಬಿಸಿ ಹಾಳು ಮಾಡುವಿರಿ ಎಂದು ನುಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಪ್ರತಿಯೊಂದು ಬಲಾಢ್ಯವಾದ ನಗರವನ್ನು ಮತ್ತು ಉತ್ತಮ ನಗರವನ್ನು ನೀವು ಮುತ್ತಿಗೆ ಹಾಕುವಿರಿ. ಪ್ರತಿಯೊಂದು ಒಳ್ಳೆಯ ಮರವನ್ನೂ ನೀವು ಕಡಿದು ಉರುಳಿಸುತ್ತೀರಿ. ಎಲ್ಲಾ ನೀರಿನ ಬುಗ್ಗೆಗಳನ್ನೂ ನೀವು ನಿಲ್ಲಿಸುವಿರಿ. ನೀವು ಕಲ್ಲುಗಳನ್ನೆಸೆದು ಪ್ರತಿಯೊಂದು ಒಳ್ಳೆಯ ತೋಟವನ್ನು ನಾಶಗೊಳಿಸುತ್ತೀರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ನಾಶಮಾಡಿಬಿಟ್ಟು, ಉತ್ತಮವಾದ ಎಲ್ಲಾ ಮರಗಳನ್ನೂ ಬೀಳಮಾಡಿ, ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಉತ್ತಮವಾದ ಭೂಮಿಯಲ್ಲಿರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ಕೆಡಿಸುವಿರಿ,” ಎಂದನು. ಅಧ್ಯಾಯವನ್ನು ನೋಡಿ |