2 ಅರಸುಗಳು 3:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರ ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ಕೆಡವಿ ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ ಬಾವಿಗಳನ್ನು ಮುಚ್ಚಿ ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ದುರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಇಸ್ರೇಲರು ನಗರಗಳನ್ನು ಕೆಡವಿಹಾಕಿದರು. ಅವರು ಮೋವಾಬಿನ ಪ್ರತಿಯೊಂದು ಉತ್ತಮ ತೋಟದ ಕಡೆಗೆ ಕಲ್ಲುಗಳನ್ನೆಸೆದರು. ಅವರು ನೀರಿನ ಬುಗ್ಗೆಗಳನ್ನೆಲ್ಲ ನಿಲ್ಲಿಸಿದರು. ಅವರು ಉತ್ತಮವಾದ ಮರಗಳನ್ನು ಕಡಿದು ಉರುಳಿಸಿದರು. ಇಸ್ರೇಲರು ಕೀರ್ಹರೆಷೆತ್‌ನ ಮಾರ್ಗದುದ್ದಕ್ಕೂ ಹೋರಾಟ ಮಾಡಿದರು. ಸೈನಿಕರು ಕೀರ್ಹರೆಷೆತನ್ನು ಸುತ್ತುವರಿದು ಅದಕ್ಕೂ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದಲ್ಲದೆ ಅವರು ಪಟ್ಟಣಗಳನ್ನು ಕೆಡವಿಹಾಕಿ, ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ, ಬಾವಿಗಳನ್ನೆಲ್ಲಾ ಮುಚ್ಚಿ, ಸಮಸ್ತ ಉತ್ತಮವಾದ ಮರಗಳನ್ನು ಕಡಿದುಹಾಕಿದರು. ಕೀರ್ ಹರೆಷೆತ್ ನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನು ಸುತ್ತಿಕೊಂಡು ಹೊಡೆದುಬಿಟ್ಟರು. ಅಧ್ಯಾಯವನ್ನು ನೋಡಿ |