Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳುನೂರು ಮಂದಿ ಯೋಧರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಪ್ರಯತ್ನಿಸಿದನು; ಆದರೆ ಆಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳು ನೂರು ಮಂದಿ ಭಟರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗ ಪ್ರಯತ್ನಿಸಿದನು; ಆದರೆ ಆಗದೆಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆ ಯುದ್ಧವು ತನ್ನ ಶಕ್ತಿಯನ್ನು ಮೀರಿ ಹೋಯಿತೆಂದು ಮೋವಾಬಿನ ರಾಜನು ಗ್ರಹಿಸಿಕೊಂಡನು. ಆದ್ದರಿಂದ ಅವನು ಎದೋಮಿನ ರಾಜನನ್ನು ಕೊಂದುಹಾಕಲು ಖಡ್ಗಗಳನ್ನು ಹಿಡಿದ ತನ್ನ ಏಳುನೂರು ಜನರೊಂದಿಗೆ ನುಗ್ಗಿಹೋಗಲು ಪ್ರಯತ್ನಿಸಿದನು. ಆದರೆ ಅವರು ಎದೋಮಿನ ರಾಜನ ಬಳಿಗೆ ನುಗ್ಗಿ ಹೋಗಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಮೋವಾಬಿನ ಅರಸನು ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಕಂಡಾಗ, ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ, ಖಡ್ಗ ಹಿಡಿಯುವ ಏಳು ನೂರು ಮಂದಿಯನ್ನು ತನ್ನ ಸಂಗಡ ತೆಗೆದುಕೊಂಡನು. ಆದರೆ ಅದು ಅವರಿಂದ ಆಗದೆ ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:26
5 ತಿಳಿವುಗಳ ಹೋಲಿಕೆ  

ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನವರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಅದು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಬೂದಿಮಾಡಿತು.


ಆಗ ಇಸ್ರಾಯೇಲ್, ಯೆಹೂದ್ಯ, ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತು ಬಳಸು ದಾರಿಯಿಂದ ಏಳು ದಿನಗಳವರೆಗೆ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ, ಅವರು ತಂದ ಪಶುಗಳಿಗೂ ನೀರು ಸಿಕ್ಕದೆ ಹೋಯಿತು.


ಅವರು ದೇಶದೊಳಗೆ ನುಗ್ಗಿ ಎಲ್ಲಾ ಪಟ್ಟಣಗಳನ್ನು ನಾಶಮಾಡಿದ್ದರು. ಹೊಲಗಳನ್ನು ಕಲ್ಲುಗಳಿಂದ ತುಂಬಿಸಿದರು. ಒರತೆಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದು ಮಾರ್ಗ ಉಳಿಯಿತು. ಕವಣೆಹೊಡೆಯುವವರು ಅದನ್ನು ಸುತ್ತಿಕೊಂಡು ಕಲ್ಲೆಸೆದರು.


ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.


ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು