Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 3:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೂ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೂ ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮುಂದುವರಿಸಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋರಾಮನು ಯಾರೊಬ್ಬಾಮನ ಪಾಪಗಳನ್ನು ನಿಲ್ಲಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೂ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಟ್ಟು ತೊಲಗದೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 3:3
20 ತಿಳಿವುಗಳ ಹೋಲಿಕೆ  

ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು” ಎಂದು ಆಕೆಗೆ ಹೇಳಿದನು.


ಇಸ್ರಾಯೇಲರು ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದು ಅವನು ಮಾಡಿದ ಪಾಪಗಳನ್ನು ತೊರೆದು ಬಿಡಲಿಲ್ಲ.


ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಆದರೂ ಇಸ್ರಾಯೇಲರು ತಮ್ಮನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮನೆಯವರ ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರ್ಯದಲ್ಲಿ ಅಶೇರ ವಿಗ್ರಹಸ್ತಂಭವು ಇದ್ದೇ ಇತ್ತು.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.


ಆತನು ಇಸ್ರಾಯೇಲರ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ ಇಸ್ರಾಯೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಯೆಹೋವನ ಭಕ್ತಿಯಿಂದ ಬೀಳಿಸಿ ಮಹಾ ಪಾಪಕ್ಕೆ ಒಳಪಡಿಸಿದನು.


ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಲು ಪ್ರೇರೇಪಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧಿಗಳ ರಕ್ತದಿಂದ ತುಂಬಿಸಿದನು.


ಇದಲ್ಲದೆ, ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನು ಬೇತೇಲಿನಲ್ಲಿ ನಿರ್ಮಿಸಿದ್ದ ಪೂಜಾಸ್ಥಳವನ್ನೂ, ಅದರಲ್ಲಿದ್ದ ಯಜ್ಞವೇದಿಯನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು