2 ಅರಸುಗಳು 4:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಒಂದು ದಿನ ಪ್ರವಾದಿ ಮಂಡಳಿಯಲ್ಲಿನ ಒಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ, “ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು. ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನು ಎಂಬುದು ನಿನಗೆ ಗೊತ್ತಿದೆಯಲ್ಲಾ. ಸಾಲಕೊಟ್ಟವನು, ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ಕರೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ” ಎಂದು ಮೊರೆಯಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಒಂದು ದಿವಸ ಪ್ರವಾದಿಮಂಡಲಿಯವರಲ್ಲೊಬ್ಬನ ಹೆಂಡತಿಯು ಎಲೀಷನ ಹತ್ತಿರ ಬಂದು ಅವನಿಗೆ - ನಿನ್ನ ಸೇವಕನಾದ ನನ್ನ ಗಂಡನು ಮರಣಹೊಂದಿದನು; ಅವನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿದ್ದನೆಂಬದು ನಿನಗೆ ಗೊತ್ತುಂಟಲ್ಲಾ; ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ದಾಸರನ್ನಾಗಿ ತೆಗೆದುಕೊಂಡು ಹೋಗುವದಕ್ಕೆ ಬಂದಿದ್ದಾನೆ ಎಂದು ಮೊರೆಯಿಟ್ಟಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಂದು ದಿನ ಪ್ರವಾದಿಮಂಡಲಿಯವರಲ್ಲೊಬ್ಬನ ಪತ್ನಿಯು ಗೋಳಾಡುತ್ತಾ ಎಲೀಷನಲ್ಲಿಗೆ ಹೋಗಿ, “ನನ್ನ ಗಂಡನು ನಿನಗೆ ಸೇವಕನಂತಿದ್ದನು. ಈಗ ನನ್ನ ಗಂಡ ಸತ್ತಿದ್ದಾನೆ! ಅವನು ಯೆಹೋವನಲ್ಲಿ ಭಯಭಕ್ತಿ ಉಳ್ಳವನಾಗಿದ್ದದು ನಿನಗೆ ತಿಳಿದಿದೆ. ಆದರೆ ಅವನು ಒಬ್ಬ ಮನುಷ್ಯನಿಗೆ ಹಣವನ್ನು ಕೊಡಬೇಕಾಗಿದೆ. ಈಗ ಆ ಮನುಷ್ಯನು ನನ್ನ ಎರಡು ಗಂಡುಮಕ್ಕಳನ್ನು ತೆಗೆದುಕೊಂಡು ತನ್ನ ಗುಲಾಮರನ್ನಾಗಿ ಮಾಡಿಕೊಳ್ಳಲು ಬರುತ್ತಿದ್ದಾನೆ!” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು. ಅಧ್ಯಾಯವನ್ನು ನೋಡಿ |