Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹುಡುಗನು ದೊಡ್ಡವನಾದ ಮೇಲೆ, ಒಂದು ದಿನ ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಹುಡುಗನು ದೊಡ್ಡವನಾದ ಮೇಲೆ ಒಂದು ದಿವಸ ಹೊಲದಲ್ಲಿ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಾಲಕನು ಬೆಳೆದನು. ಒಂದು ದಿನ, ಹೊಲದಲ್ಲಿ ಬೆಳೆಕೊಯ್ಯುತ್ತಿದ್ದ ಜನರೊಂದಿಗಿದ್ದ ತನ್ನ ತಂದೆಯನ್ನು ನೋಡಲು ಆ ಬಾಲಕನು ಹೊಲಕ್ಕೆ ಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆ ಮಗುವು ಬೆಳೆದಾಗ ಒಂದು ದಿವಸ, ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:18
4 ತಿಳಿವುಗಳ ಹೋಲಿಕೆ  

ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.


ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.


ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು