Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದರೂ ಆ ಹುಡುಗನ ತಾಯಿ, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ,” ಎಂದಳು. ಆದ್ದರಿಂದ ಎಲೀಷನು ಆಕೆಯ ಜೊತೆಯಲ್ಲೇ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆದರೂ ಹುಡುಗನ ತಾಯಿ - ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವದಿಲ್ಲ ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಮಗುವಿನ ತಾಯಿಯು, “ಯೆಹೋವನಾಣೆ, ನಿನ್ನಾಣೆ, ನಿನ್ನನ್ನು ಬಿಟ್ಟು ನಾನು ಹೋಗುವುದಿಲ್ಲ” ಎಂದು ಹೇಳಿದಳು. ಎಲೀಷನು ಮೇಲೆದ್ದು ಶೂನೇಮಿನ ಆ ಸ್ತ್ರೀಯನ್ನು ಹಿಂಬಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಹುಡುಗನ ತಾಯಿಯು, “ಯೆಹೋವ ದೇವರ ಜೀವದಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದಳು. ಆಗ ಅವನೆದ್ದು ಅವಳ ಹಿಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:30
8 ತಿಳಿವುಗಳ ಹೋಲಿಕೆ  

ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಬೇತೇಲಿಗೆ ಹೋಗಬೇಕೆಂದು” ಆಜ್ಞಾಪಿಸಿದ್ದಾನೆ ಎನ್ನಲು, ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರಕೊಟ್ಟನು. ತರುವಾಯ ಅವರಿಬ್ಬರೂ ಬೇತೇಲಿಗೆ ಹೋದರು.


ಆಗ ಎಲೀಯನು ಎಲೀಷನಿಗೆ, “ನೀನು ಇಲ್ಲೇ ಇರು, ಯೆಹೋವನು ನನಗೆ ಯೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಎಲೀಷನು ಅವನ ಜೊತೆಯಲ್ಲಿ ಯೆರಿಕೋವಿಗೆ ಹೋದನು.


ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.


ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ,


ಎಲೀಯನು ತಿರುಗಿ ಅವನಿಗೆ, “ನೀನು ಇಲ್ಲೇ ಇರು. ಯೆಹೋವನು ನನಗೆ ಯೊರ್ದನಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಅದಕ್ಕೆ ಎಲೀಷನು, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಉತ್ತರ ಕೊಟ್ಟನು. ಅನಂತರ ಅವರಿಬ್ಬರೂ ಹೊರಟು ಯೊರ್ದನ್ ಹೊಳೆಯ ದಡಕ್ಕೆ ಬಂದರು.


ಅವರಲ್ಲೊಬ್ಬನು, “ದಯವಿಟ್ಟು ನೀನೂ, ನಿನ್ನ ಸೇವಕರು ನಮ್ಮ ಜೊತೆಯಲ್ಲಿ ಬರಬೇಕು” ಎಂದು ಬೇಡಿಕೊಂಡನು. ಅದಕ್ಕೆ ಎಲೀಷನು, “ಬರುತ್ತೇನೆ” ಎಂದು ಹೇಳಿ ಅವರೊಡನೆ ಹೊರಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು