2 ಅರಸುಗಳು 4:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಹುಡುಗನು ಮಾತನಾಡಲಿಲ್ಲ, ಎಚ್ಚರಗೊಳ್ಳಲೂ ಇಲ್ಲ. ಆದುದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿರಲಿಲ್ಲ, ಜೀವದ ಲಕ್ಷಣವಿರಲಿಲ್ಲ. ಆದುದರಿಂದ ಅವನು ಹಿಂದಿರುಗಿ ಬಂದು ಎಲೀಷನನ್ನು ಎದುರುಗೊಂಡು, “ಹುಡುಗನು ಎಚ್ಚರವಾಗಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿಲ್ಲ, ಜೀವದ ಲಕ್ಷಣವಿಲ್ಲ. ಆದದರಿಂದ ಅವನು ಹಿಂದಿರುಗಿ ಹೋಗಿ ಎಲೀಷನನ್ನು ಎದುರುಗೊಂಡು ಅವನಿಗೆ - ಹುಡುಗನು ಎಚ್ಚರವಾಗಲಿಲ್ಲ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಶೂನೇಮಿನ ಆ ಸ್ತ್ರೀಯ ಮನೆಗೆ, ಎಲೀಷನು ಮತ್ತು ಶೂನೇಮಿನ ಸ್ತ್ರೀಯು ಬರುವುದಕ್ಕೆ ಮುಂಚೆಯೇ ಗೇಹಜಿಯು ಬಂದನು. ಗೇಹಜಿಯು ಮಗುವಿನ ಮುಖದ ಮೇಲೆ ಆ ಕೋಲನ್ನಿಟ್ಟನು. ಆದರೆ ಆ ಮಗು ಮಾತನಾಡಲಿಲ್ಲ; ಅಲುಗಾಡಲಿಲ್ಲ. ಆಗ ಗೇಹಜಿಯು ಎಲೀಷನನ್ನು ಸಂಧಿಸಲು ಹಿಂದಿರುಗಿ ಬಂದು ಎಲೀಷನಿಗೆ, “ಮಗು ಎಚ್ಚರಗೊಳ್ಳಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಗೇಹಜಿಯು ಅವರಿಗೆ ಮುಂದಾಗಿ ಹೋಗಿ, ಆ ಕೋಲನ್ನು ಆ ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ, ಆಲೈಸುವುದಾದರೂ ಇರಲಿಲ್ಲ. ಆದ್ದರಿಂದ ಗೇಹಜಿಯು ಎಲೀಷನನ್ನು ಎದುರುಗೊಳ್ಳಲು ತಿರುಗಿ ಹೋಗಿ ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |