Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಎಲೀಷನು ಒಳಗೆ ಹೋಗಿ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಸರ್ವೇಶ್ವರನನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲನ್ನು ಮುಚ್ಚಿಕೊಂಡು ಯೆಹೋವನನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಎಲೀಷನು ಕೊಠಡಿಯಲ್ಲಿ ಪ್ರವೇಶಿಸಿ ಬಾಗಿಲನ್ನು ಮುಚ್ಚಿದನು. ಈಗ ಎಲೀಷ ಮತ್ತು ಮಗು ಮಾತ್ರ ಕೊಠಡಿಯಲ್ಲಿದ್ದರು. ನಂತರ ಎಲೀಷನು ಯೆಹೋವನಲ್ಲಿ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವನು ಒಳಗೆ ಪ್ರವೇಶಿಸಿ, ಯಾರೂ ಒಳಗೆ ಬಾರದಂತೆ ಬಾಗಿಲು ಮುಚ್ಚಿಕೊಂಡು, ಯೆಹೋವ ದೇವರನ್ನು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:33
12 ತಿಳಿವುಗಳ ಹೋಲಿಕೆ  

ನೀನು ಪ್ರಾರ್ಥನೆಮಾಡುವಾಗ ನಿನ್ನ ಕೋಣೆಯೊಳಗೆ ಹೋಗಿ ಬಾಗಿಲನ್ನು ಮುಚ್ಚಿಕೊಂಡು ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಫಲಕೊಡುವನು.


ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು.


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.


ತರುವಾಯ ಆತನು ಆ ಅಧಿಕಾರಿಯ ಮನೆಗೆ ಹೋಗಿ, ಪೇತ್ರ ಯೋಹಾನ ಯಾಕೋಬ ಮತ್ತು ಆ ಹುಡುಗಿಯ ತಂದೆತಾಯಿಯರನ್ನು ಹೊರತು ಬೇರೆ ಯಾರನ್ನೂ ತನ್ನ ಸಂಗಡ ಒಳಕ್ಕೆ ಬರಗೊಡಿಸಲಿಲ್ಲ.


ಅವರು ಸಮಾರ್ಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆ” ಎಂದು ಯೆಹೋವನನ್ನು ಬೇಡಿಕೊಂಡದ್ದರಿಂದ ಆತನು ಅವರ ಕಣ್ಣುಗಳನ್ನು ತೆರೆದನು. ಆಗ ಅವರಿಗೆ ತಾವು ಸಮಾರ್ಯದಲ್ಲಿದ್ದೇವೆಂದು ತಿಳಿದುಬಂತು.


ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.


ಎಲೀಷನು ಆ ಮನೆಯನ್ನು ತಲುಪಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಮಲಗಿಸಿರುವುದನ್ನು ಕಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು