Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯನ್ನು ತುಸುಹೊತ್ತು ಅತ್ತಿತ್ತ ಅಡ್ಡಾಡಿ, ತಿರುಗಿ ಅವನ ಮೇಲೆ ಬೋರಲು ಬೀಳಲು, ಹುಡುಗನು ಏಳು ಸಾರಿ ಸೀತು ಕಣ್ತೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರಿಗಿ ಅವನ ಮೇಲೆ ಬೋರ್ಲ ಬೀಳಲು ಹುಡುಗನು ಏಳು ಸಾರಿ ಸೀತು ಕಣ್ದೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಎಲೀಷನು ಕೊಠಡಿಯಿಂದ ಹೊರಗೆ ಬಂದು ಮನೆಯಲ್ಲಿ ಸುತ್ತಲೂ ನಡೆದಾಡಿದನು. ನಂತರ ಅವನು ಕೊಠಡಿಯೊಳಕ್ಕೆ ಹಿಂದಿರುಗಿ ಹೋಗಿ ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗು ಏಳು ಸಾರಿ ಸೀನಿ ತನ್ನ ಕಣ್ಣುಗಳನ್ನು ತೆರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಅವನು ಆಮೇಲೆ ಎದ್ದು ಕೋಣೆಯಲ್ಲಿ ಸ್ವಲ್ಪ ಅತ್ತಿತ್ತ ತಿರುಗಾಡಿ, ಪುನಃ ಅವನ ಮೇಲೆ ಬೋರಲು ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ಕಣ್ಣುಗಳನ್ನು ತೆರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:35
13 ತಿಳಿವುಗಳ ಹೋಲಿಕೆ  

ಒಂದು ದಿನ ಜನರು ಒಬ್ಬ ಸತ್ತವನನ್ನು ಸಮಾಧಿಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಸತ್ತ ಮನುಷ್ಯನ ದೇಹವು ಎಲೀಷನ ಎಲುಬುಗಳಿಗೆ ತಗಲಿದ ಕೂಡಲೆ ಅವನು ಜೀವ ಬಂದು ಎದ್ದು ನಿಂತನು.


ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ಅರಸನಿಗೆ ವಿವರಿಸುತ್ತಿರುವಾಗಲೇ ಜೀವದಾನಹೊಂದಿದ ಹುಡುಗನ ತಾಯಿಯು ತನ್ನ ಹೊಲಮನೆಗಳಿಗಾಗಿ ಮೊರೆಯಿಡುವುದಕ್ಕೋಸ್ಕರ ಅರಸನ ಬಳಿಗೆ ಬಂದಳು. ಕೂಡಲೇ ಗೇಹಜಿಯು, “ನನ್ನ ಒಡೆಯನೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆಯು ಇವನ ತಾಯಿ” ಎಂದು ಹೇಳಿದನು.


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.


ಆಕೆಯ ಆತ್ಮವು ತಿರುಗಿ ಬಂದು ತಕ್ಷಣವೇ ಆಕೆ ಎದ್ದಳು. ತರುವಾಯ ಆತನು, ಈಕೆಗೆ ಊಟಮಾಡಿಸಿರಿ ಎಂದು ಅಪ್ಪಣೆಕೊಟ್ಟನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.


ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.


ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು” ಎಂಬುದಾಗಿ ಆತನಿಗೆ ಮೊರೆಯಿಟ್ಟನು.


ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೋ” ಎಂದು ಹೇಳಿದನು.


ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, “ಏನೂ ಕಾಣುವುದಿಲ್ಲ” ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.


ಎಲೀಷನು ಅವನಿಗೆ, “ಹೋಗಿ ಯೊರ್ದನ್ ನದಿಯಲ್ಲಿ ಏಳು ಸಾರಿ ಮುಳುಗಿ ಬಾ, ಆಗ ನಿನ್ನ ದೇಹವು ಮೊದಲಿನಂತಾಗುವುದು; ನೀನು ಶುದ್ಧನಾಗುವಿ” ಎಂದು ಹೇಳಿ ಕಳುಹಿಸಿದನು.


ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು