Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ” ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ, ಎಲೀಷನು ಆಕೆಗೆ, “ನಿನ್ನ ಮಗನನ್ನು ತೆಗೆದುಕೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ,” ಎಂದು ಆಜ್ಞಾಪಿಸಲು, ಅವನು ಆಕೆಯನ್ನು ಕರೆದನು. ಆಕೆ ಬಂದಾಗ ಎಲೀಷನು, “ನಿನ್ನ ಮಗನನ್ನುತೆಗೆದುಕೋ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಗ ಎಲೀಷನು ಗೇಹಜಿಗೆ - ಶೂನೇಮ್ಯಳನ್ನು ಕರೆ ಎಂದು ಆಜ್ಞಾಪಿಸಲು ಅವನು ಆಕೆಯನ್ನು ಕರೆದನು. ಆಕೆಯು ಬಂದಾಗ ಎಲೀಷನು ಆಕೆಗೆ - ನಿನ್ನ ಮಗನನ್ನು ತೆಗೆದುಕೋ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಎಲೀಷನು ಗೇಹಜಿಯನ್ನು ಕರೆದು, “ಶೂನೇಮಿನ ಸ್ತ್ರೀಯನ್ನು ಕರೆ” ಎಂದು ಹೇಳಿದನು. ಗೇಹಜಿಯು ಶೂನೇಮಿನ ಸ್ತ್ರೀಯನ್ನು ಕರೆದನು. ಅವಳು ಎಲೀಷನ ಹತ್ತಿರಕ್ಕೆ ಬಂದಳು. ಎಲೀಷನು, “ನಿನ್ನ ಮಗನನ್ನು ಎತ್ತಿಕೊ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ಅವನು ಗೇಹಜಿಯನ್ನು ಕರೆದು ಅವನಿಗೆ, “ಶೂನೇಮ್ಯಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದನು. ಅವಳು ಎಲೀಷನ ಬಳಿಗೆ ಬಂದಾಗ ಅವನು, “ನಿನ್ನ ಪುತ್ರನನ್ನು ತೆಗೆದುಕೊಂಡು ಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:36
8 ತಿಳಿವುಗಳ ಹೋಲಿಕೆ  

ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.


ಅನ್ನುತ್ತಲೇ ಸತ್ತಿದ್ದವನು ಎದ್ದು ಕುಳಿತುಕೊಂಡು ಮಾತನಾಡುವುದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದನು.


ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ” ಅಂದನು.


ಆನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.


ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.


ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು.


ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.


ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು