Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು. ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೇವರ ಮನುಷ್ಯನೇ ಪಾತ್ರೆಯಲ್ಲಿ ವಿಷ” ಎಂದು ಕೂಗಿದರು. ಅದನ್ನು ತಿನ್ನಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು; ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೈವಪುರುಷನೇ, ಪಾತ್ರೆಯಲ್ಲಿ ವಿಷ!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು; ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ - ದೇವರ ಮನುಷ್ಯನೇ, ಪಾತ್ರೆಯಲ್ಲಿ ವಿಷ ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನಂತರ ಅವರು ಸ್ವಲ್ಪ ಸಾರನ್ನು ಜನರಿಗೆ ತಿನ್ನಲು ಬಡಿಸಿದರು. ಆದರೆ ಅವರು ಆ ಸಾರನ್ನು ಊಟಮಾಡಲಾರಂಭಿಸಿದಾಗ, ಅವರು, “ದೇವಮನುಷ್ಯನೇ! ಪಾತ್ರೆಯಲ್ಲಿ ವಿಷವಿದೆ!” ಎಂದು ಎಲೀಷನನ್ನು ಕೂಗಿಕೊಂಡರು. ಆ ಆಹಾರವು ತಿನ್ನಲು ಯೋಗ್ಯವಾಗಿರಲಿಲ್ಲವಾದುದರಿಂದ ಅವರು ಆ ಪಾತ್ರೆಯಿಂದ ಏನನ್ನೂ ತಿನ್ನಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಜನರಿಗೆ ಅದನ್ನು ತಿನ್ನುವುದಕ್ಕೆ ಬಡಿಸಿದರು. ಅವರು ಆಹಾರವನ್ನು ತಿನ್ನುತ್ತಿರುವಾಗ, “ದೇವರ ಮನುಷ್ಯನೇ, ಗಡಿಗೆಯಲ್ಲಿ ಮರಣ,” ಎಂದು ಕೂಗಿದರು. ಅವರು ಅದರಲ್ಲಿದ್ದದ್ದನ್ನು ತಿನ್ನಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:40
11 ತಿಳಿವುಗಳ ಹೋಲಿಕೆ  

ಹಾವುಗಳನ್ನು ಕೈಗಳಿಂದ ಎತ್ತಿಕೊಳ್ಳುವರು; ವಿಷಪದಾರ್ಥಗಳನ್ನೇನಾದರು ಕುಡಿದರೂ ಅವರಿಗೆ ಯಾವ ಹಾನಿಯೂ ಆಗುವುದಿಲ್ಲ. ಅವರು ರೋಗಿಗಳ ಮೇಲೆ ಕೈಯಿಟ್ಟರೆ ಅವರಿಗೆ ಸ್ವಸ್ಥವಾಗುವುದು” ಎಂದು ಹೇಳಿದನು.


ತರುವಾಯ ಅವರು ಮಾರಾ ಎಂಬ ಸ್ಥಳಕ್ಕೆ ಬಂದರು. ಆದರೆ ಆ ಸ್ಥಳದ ನೀರು ಕಹಿಯಾಗಿದ್ದರಿಂದ ಅವರಿಗೆ ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದಲೇ ಆ ಸ್ಥಳಕ್ಕೆ ಮಾರಾ ಎಂದು ಹೆಸರಾಯಿತು.


ಆದರೂ ಈ ಒಂದೇ ಸಾರಿ ನನ್ನ ಪಾಪಗಳನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಯೆಹೋವನು ಈ ಮರಣಕರವಾದ ವಿಪತ್ತನ್ನು ನನ್ನ ಬಳಿಯಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು” ಎಂದನು.


ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.


ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.


ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.


ಆಗ ಆ ಸ್ತ್ರೀಯು ಎಲೀಯನಿಗೆ, “ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?” ಎಂದಳು.


ದೇವಪುರುಷನಾದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಾಯೇಲರ ವಿಷಯವಾಗಿ ಹೇಳಿದ ಆಶೀರ್ವಾದವು:


ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.


ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರುವಾಗ ಏಸಾವನು ಕಾಡಿನಿಂದ ದಣಿದು ಬಂದು ಅವನಿಗೆ, “ನಾನು ಬಹಳ ದಣಿದು ಬಂದಿದ್ದೇನೆ;


ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು ಅದನ್ನು ಕಿತ್ತು ಉಡಿಯಲ್ಲಿ ತುಂಬಿಕೊಂಡು, ಅದರ ಕಾಯಿಗಳನ್ನು ಕಿತ್ತುಕೊಂಡು ಬಂದು ತುಂಡು ತುಂಡು ಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು