Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಒಂದು ದಿವಸ ಬಾಳ್‍ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲತುಂಬಾ ಹಸೀ ತೆನೆಗಳನ್ನೂ ಪ್ರಥಮ ಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ - ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಬಾಳ್‌ಷಾಲಿಷಾದಿಂದ ಒಬ್ಬ ಮನುಷ್ಯನು ಪ್ರಥಮ ಸುಗ್ಗಿಯ ರೊಟ್ಟಿಗಳನ್ನು ದೇವಮನುಷ್ಯನಿಗೆ (ಎಲೀಷನಿಗೆ) ತೆಗೆದುಕೊಂಡು ಬಂದನು. ಇವನು ಇಪ್ಪತ್ತು ಜವೆಗೋಧಿ ರೊಟ್ಟಿಗಳನ್ನೂ ಒಂದು ಚೀಲದಲ್ಲಿ ಹಸೀ ತೆನೆಗಳನ್ನೂ ತಂದನು. ಆಗ ಎಲೀಷನು, “ಜನರಿಗೆ ಈ ಆಹಾರವನ್ನು ಕೊಡು, ಅವರು ತಿನ್ನಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:42
22 ತಿಳಿವುಗಳ ಹೋಲಿಕೆ  

ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲು


ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.


“ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,


ಆಗ ಎಲೀಷನು ಅವನಿಗೆ, “ಯೆಹೋವನ ವಾಕ್ಯವನ್ನು ಕೇಳು, ಆತನು, ‘ನಾಳೆ ಈ ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ರೂಪಾಯಿಗೆ ಹನ್ನೆರಡು ಸೇರಿನಂತೆಯೂ, ಜವೆಗೋದಿಯು ಇಪ್ಪತ್ತನಾಲ್ಕು ಸೇರಿನಂತೆಯೂ ಮಾರಲ್ಪಡುವುದು’” ಎನ್ನುತ್ತಾನೆ ಎಂದು ಹೇಳಿದನು.


ಅದರಂತೆಯೇ ಅವನು ಹೊರಟು ಎಫ್ರಾಯೀಮ್ ಪರ್ವತಪ್ರಾಂತ್ಯ, ಶಾಲಿಷಾ ದೇಶ ಇವುಗಳಲ್ಲಿ ಸಂಚರಿಸಿ ಹುಡುಕಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ್ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.


ನಾವು ನಿಮ್ಮಲ್ಲಿ ಆತ್ಮೀಕವಾದ ಬೀಜವನ್ನು ಬಿತ್ತಿದ ಮೇಲೆ ನಿಮ್ಮಿಂದ ಭೌತಿಕವಾದ ಪೈರನ್ನು ಕೊಯ್ಯುವುದು ದೊಡ್ಡ ವಿಷಯವೋ?


ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.


ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”


ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.


ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.


ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.


ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.


ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು” ಎಂದು ಹೇಳಿದನು.


ಅರಾಮ್ಯರ ಅರಸನು ಅವನಿಗೆ, “ನೀನು ಅಲ್ಲಿಗೆ ಹೋಗಿ ಬಾ. ನಾನು ನಿನ್ನ ಕೈಯಲ್ಲಿ ಇಸ್ರಾಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ” ಎಂದನು. ನಾಮಾನನು ಹತ್ತು ತಲಾಂತು ಬೆಳ್ಳಿ, (ಮೂವತ್ತು ಸಾವಿರ) ಆರು ಸಾವಿರ ತೊಲೆ ಬಂಗಾರ, ಹತ್ತು ಜೊತೆ ಬಟ್ಟೆಗಳು ಇವುಗಳನ್ನು ತೆಗೆದುಕೊಂಡು ಸಮಾರ್ಯಕ್ಕೆ ಹೋಗಿ,


ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.


ಅವರು ತಮ್ಮ ದೇಶದ ಎಲ್ಲಾ ಬೆಳೆಗಳಲ್ಲಿ ಯೆಹೋವನಿಗೋಸ್ಕರ ತರುವ ಪ್ರಥಮಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು