2 ಅರಸುಗಳು 4:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅದಕ್ಕೆ ಅವನು, “ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ” ಎಂದನು. ಎಲೀಷನು ಅವನಿಗೆ, “ಇರಲಿ, ಕೊಡು. ಅವರು ಊಟಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಎನ್ನುತ್ತಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಅದಕ್ಕೆ ಅವನು, “ಇಷ್ಟನ್ನು ನೂರುಮಂದಿಗೆ ಹೇಗೆ ಬಡಿಸಲಿ,” ಎಂದನು. ಎಲೀಷನು, “ಇರಲಿ, ಕೊಡು; ಅವರು ಊಟಮಾಡಲಿ. ‘ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು’ ಎಂಬುದು ಸರ್ವೇಶ್ವರನ ನುಡಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅದಕ್ಕೆ ಅವನು - ಇಷ್ಟನ್ನು ನೂರು ಮಂದಿಗೆ ಹೇಗೆ ಬಡಿಸಲಿ ಅಂದನು. ಎಲೀಷನು ಅವನಿಗೆ - ಇರಲಿ, ಕೊಡು; ಅವರು ಊಟ ಮಾಡಲಿ. ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರೆಂದು ಯೆಹೋವನು ಅನ್ನುತ್ತಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಎಲೀಷನ ಸೇವಕನು, “ಏನು? ಇಲ್ಲಿ ನೂರು ಮಂದಿ ಜನರಿದ್ದಾರೆ. ಈ ಆಹಾರವನ್ನು ಇಲ್ಲಿರುವ ಜನರಿಗೆಲ್ಲ ಹೇಗೆ ಕೊಡಲಿ?” ಎಂದನು. ಆದರೆ ಎಲೀಷನು, “ಜನರಿಗೆ ತಿನ್ನಲು ಆಹಾರವನ್ನು ಕೊಡು, ಯೆಹೋವನು ಹೀಗೆನ್ನುವನು: ‘ಅವರು ತಿಂದರೂ ಆಹಾರವು ಉಳಿಯುತ್ತದೆ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಅವನ ಸೇವಕನು, “ಇದನ್ನು ನೂರು ಮಂದಿಗೆ ಬಡಿಸುವುದು ಹೇಗೆ?” ಎಂದನು. “ ‘ತಿನ್ನಲು ಜನರಿಗೆ ನೀಡು, ಅವರು ತಿಂದು ಅನಂತರ ಉಳಿಯುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಎಲೀಷನು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿ |