Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ತರುವಾಯ ಆಕೆ ಆ ದೈವಪುರುಷನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ ಆ ಎಣ್ಣೆಯನ್ನು ಮಾರಿ ಸಾಲ ತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕೂಡಲೆ ಎಣ್ಣೆಯುಕ್ಕುವದು ನಿಂತು ಹೋಯಿತು. ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ - ಹೋಗಿ ಎಣ್ಣೆಯನ್ನು ಮಾರಿ ಸಾಲತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಆ ಸ್ತ್ರೀಯು ದೇವರ ಮನುಷ್ಯನ (ಎಲೀಷನ) ಬಳಿಗೆ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಎಲೀಷನು ಅವಳಿಗೆ, “ಹೋಗು, ಎಣ್ಣೆಯನ್ನು ಮಾರಾಟಮಾಡಿ, ನಿನ್ನ ಸಾಲವನ್ನು ತೀರಿಸು. ಉಳಿದ ಹಣದಲ್ಲಿ ನೀನು ಮತ್ತು ನಿನ್ನ ಮಕ್ಕಳು ಜೀವನಮಾಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 4:7
11 ತಿಳಿವುಗಳ ಹೋಲಿಕೆ  

ಕಡೆಯದಾಗಿ, ಸಹೋದರರೇ, ಯಾವುದು ಸತ್ಯವೂ, ಮಾನ್ಯವೂ, ನ್ಯಾಯವೂ, ಶುದ್ಧವೂ, ಪ್ರೀತಿಕರವೂ, ಮನೋಹರವೂ ಆಗಿದೆಯೋ, ಯಾವುದು ಸದ್ಗುಣವಾಗಿದೆಯೋ, ಯಾವುದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳ ಬಗ್ಗೆ ಚಿಂತಿಸುವವರಾಗಿರಿ.


ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.


ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.


ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.


ಹೀಗಿದ್ದರೆ ನೀವು ಹೊರಗಿನವರ ದೃಷ್ಟಿಯಲ್ಲಿ ಸಜ್ಜನರಾಗಿರುವುದೇ ಅಲ್ಲದೆ ನಿಮಗೆ ಯಾವುದಕ್ಕೂ ಕೊರತೆಯಿರುವುದಿಲ್ಲ.


ಆ ಸ್ತ್ರೀಯು ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಲ್ಲಿ ಹೋಗುತ್ತಾ ಬರುತ್ತಾ ಇರುವ ಆ ಮನುಷ್ಯನು ಪರಿಶುದ್ಧನೂ, ದೇವರ ಮನುಷ್ಯನೂ ಆಗಿರುತ್ತಾನೆ ಎಂದು ನನಗೆ ಗೊತ್ತಾಯಿತು.


ಕೂಡಲೆ ಆಕೆಯು ಅವನನ್ನು ದೇವರ ಮನುಷ್ಯನ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮಂಚದ ಮೇಲೆ ಮಗನನ್ನು ಮಲಗಿಸಿ ಬಾಗಿಲು ಮುಚ್ಚಿದಳು.


ದೇವರ ಮನುಷ್ಯನು ಇಸ್ರಾಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ, ನೀವು ಇಂಥಿಂಥ ಸ್ಥಳದಲ್ಲಿ ಹೋಗಬಾರದು. ಅಲ್ಲಿ ಅರಾಮ್ಯರು ಅಡಗಿಕೊಂಡಿದ್ದಾರೆ” ಎಂದು ತಿಳಿಸುತ್ತಿದ್ದನು.


ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು