Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 5:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಾಮ್ಯರ ಅರಸನಿಗೆ ನಾಮಾನನೆಂಬ ಒಬ್ಬ ಸೇನಾಧಿಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದ್ದದರಿಂದ ಅರಸನು ಇವನನ್ನು ಮಹಾ ಪುರುಷನೆಂದೂ ಸನ್ಮಾನಯೋಗ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಂಖಾತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಾಮ್ಯರ ಅರಸನಿಗೆ ನಾಮಾನನೆಂಬೊಬ್ಬ ಸೇನಾಪತಿಯಿದ್ದನು. ಯೆಹೋವನು ಇವನ ಮುಖಾಂತರವಾಗಿ ಅರಾಮ್ಯರಿಗೆ ಜಯವನ್ನು ಅನುಗ್ರಹಿಸಿದದರಿಂದ ಅರಸನು ಇವನನ್ನು ಮಹಾಪುರುಷನೆಂದೂ ಸನ್ಮಾನಯೋಗ್ಯನೆಂದೂ ಎಣಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಕುಷ್ಠರೋಗಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅರಾಮ್ಯರ ರಾಜನ ಸೇನೆಯಲ್ಲಿ ನಾಮಾನನೆಂಬ ಸೇನಾಪತಿಯಿದ್ದನು. ನಾಮಾನನು ಅವನ ರಾಜನಿಗೆ ಬಹಳ ಪ್ರಾಮುಖ್ಯ ವ್ಯಕ್ತಿಯಾಗಿದ್ದನು. ಯೆಹೋವನು ನಾಮಾನನ ಮುಖಾಂತರ ಅರಾಮ್ಯರಿಗೆ ವಿಜಯವನ್ನು ತಂದುಕೊಟ್ಟಿದ್ದರಿಂದ ಅವನು ಪ್ರಮುಖನಾಗಿದ್ದನು. ನಾಮಾನನು ಮಹಾಪುರುಷನೂ ಶಕ್ತಿಶಾಲಿಯೂ ಆದ ಮನುಷ್ಯನಾಗಿದ್ದನು. ಆದರೆ ಅವನು ಕುಷ್ಠರೋಗ ಪೀಡಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 5:1
20 ತಿಳಿವುಗಳ ಹೋಲಿಕೆ  

ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು” ಎಂದು ಹೇಳಿದನು.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವುದಕ್ಕಾಗಿ ನನ್ನ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ, ಸೂಚಕಕಾರ್ಯಗಳ, ಅದ್ಭುತಕಾರ್ಯಗಳ ಬಲದಿಂದಲೂ, ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು.


ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.


ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.


ಅಮ್ಮೋನಿಯರ ದೇಶವನ್ನು ಮಾತ್ರ ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶವು ಮತ್ತು ಬೆಟ್ಟದ ಸೀಮೆಯ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇ ಬಾರದೆಂದು ನಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ್ದನು.


ಯೆಹೂದ್ಯನಾದ ಮೊರ್ದೆಕೈಯಾದರೋ ರಾಜ್ಯದಲ್ಲಿ ಅರಸನಾದ ಅಹಷ್ವೇರೋಷನ ದ್ವಿತೀಯ ಸ್ಥಾನದವನೂ, ಯೆಹೂದ್ಯರಲ್ಲಿ ಸನ್ಮಾನಿತನೂ, ತನ್ನ ಬಂಧುಬಳಗಕ್ಕೆ ಪ್ರೀತಿಪಾತ್ರನೂ, ಸ್ವಜನರ ಹಿತಚಿಂತಕನೂ ಮತ್ತು ಸ್ವಕುಲದವರೆಲ್ಲರಿಗೂ ಶಾಂತಿದೂತನೂ, ಪ್ರಾರ್ಥನಾಪರನೂ ಆಗಿದ್ದನು.


ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಯೆಹೋವನು ಇಸ್ರಾಯೇಲರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತ ದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಹಾಗು ಜನರು ಮೋಶೆಯನ್ನು ಮಹಾಶ್ರೇಷ್ಠಪುರುಷನೆಂದು ಭಾವಿಸಿದರು.


ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಅದಕ್ಕೆ ಯೇಸು, “ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ” ಎಂದು ಉತ್ತರ ಕೊಟ್ಟನು.


ಊರುಬಾಗಿಲಿನ ಹತ್ತಿರ ನಾಲ್ಕು ಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೆ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೋ?


ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.


ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.


ಅರಾಮ್ಯರು ಒಂದು ಸಾರಿ ಸುಲಿಗೆ ಮಾಡುವುದಕ್ಕೋಸ್ಕರ ಇಸ್ರಾಯೇಲರ ಪ್ರಾಂತ್ಯಕ್ಕೆ ಹೋಗಿ ಬರುವಾಗ ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದಿದ್ದರು. ಆಕೆಯು ನಾಮಾನನ ಹೆಂಡತಿಗೆ ಸೇವಕಿಯಾದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು